ಮುಂದಿನ ಎರಡು ವಾರಗಳ ಕಾಲ ಬಿಸಿಲು – ಒಣ ಹವೆ; ಹವಾಮಾನ ಇಲಾಖೆ ವರದಿ

Date:

ಸದ್ಯ ರಾಜ್ಯದಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಈ ಬಿಸಿಲು ಮತ್ತು ಒಣ ಹವೆ ಮುಂದಿನ ಎರಡು ವಾರಗಳ ಕಾಲ ಮುಂದುವರೆಯಲಿದ್ದು, ಏಪ್ರಿಲ್‌ 15ರವರೆಗೂ ತಾಪಮಾನ ಏರಿಕೆಯಾಗಲಿದೆ. ಅಲ್ಲದೇ, ಏಪ್ರಿಲ್‌ನ ಮೊದಲ ಎರಡು ವಾರ ಕಡುಬೇಸಿಗೆ ಇರಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (KSNMDC) ಹೇಳಿದೆ.

- Advertisement -

ಮಾರ್ಚ್‌ 26 ಮತ್ತು ಮಾರ್ಚ್‌ 27ರಂದು ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಳಗಾವಿಯ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ಮಾರ್ಚ್ 26ರಂದು ಸಹ ಬೆಳಗಾವಿಯ ಸುತ್ತಮುತ್ತ ಹಗುರ ಮಳೆಯಾಗಲಿದೆ. ರಾಜ್ಯದಾದ್ಯಂತ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏಪ್ರಿಲ್‌ 3ನೇ ವಾರದ ಬಳಿಕ ಪರಿಸ್ಥಿತಿ ತಹಬದಿಗೆ ಬರಲಿದೆ. ಪೂರ್ವ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದೆ. ಆಯ್ದ ಕಡೆಗಳಲ್ಲಿ ಮಾರ್ಚ್ ತಿಂಗಳ ವಾಡಿಕೆಯ 9 ಮಿ.ಮೀ. ಬದಲಿಗೆ 10 ಮಿ.ಮೀ. ಬೇಸಿಗೆ ಮಳೆಯಾಗಿದ್ದು, ಉಷ್ಣಾಂಶ ಏರಿಕೆಯಿಂದ ಮಳೆಯ ಪ್ರಮಾಣವೂ ಮುಂದಿನ ದಿನಗಳಲ್ಲಿ ಉತ್ತಮವಾಗಿರುತ್ತದೆ ಎಂದು ಮುನ್ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ಮತ್ತೆ ಇಬ್ಬರು ಎನ್‌ಐಎ ವಶಕ್ಕೆ

  • ಮೈಸೂರಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಮಂಡ್ಯದಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಕಾರವಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ವಿಜಯಪುರದಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಬೀದರ್‌ನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
  • ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...