ನೇಕಾರರ ವಿಶೇಷ ಯೋಜನೆಯಡಿ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ

Date:

ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಹೆಚ್.ಪಿ. ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ವಿದ್ಯುತ್‌ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿ, ಈ ವಿಷಯ ತಿಳಿಸಿದರು. ಇದಲ್ಲದೆ 10 ಹೆಚ್.ಪಿ.ವರೆಗಿನ ಘಟಕಗಳಿಗೆ 250 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲು ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ಇದಲ್ಲದೆ ಹಿಂದುಳಿದ ವರ್ಗಗಳ 2ಎ ವರ್ಗದಡಿ ಬರುವ ಸಮುದಾಯಗಳ ಗುತ್ತಿಗೆದಾರರಿಗೆ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಲಾಗಿದೆ ಎಂದು ವಿವರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿಯವರನ್ನು ಭೇಟಿಯಾದ ನೇಕಾರರು ತಮ್ಮ ವೃತ್ತಿಪರ ಚಟುವಟಿಕೆಗಳಿಗೆ ಮುಖ್ಯಮಂತ್ರಿಯವರು ಹಿಂದಿನಿಂದಲೂ ಬೆಂಬಲ ನೀಡಿದ್ದನ್ನು ಸ್ಮರಿಸಿ, ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನೂ ನೀಡುವಂತೆ ಮನವಿ ಮಾಡಿದರು. ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡುವುದು, ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ನೇಕಾರರ ನಿಯೋಗವು ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿತು. ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಶ್ರೀ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶಿವಾನಂದ ಸ್ವಾಮಿಗಳು, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ ಎಸ್ ಸೋಮಶೇಖರ ಮತ್ತಿತರ ನೇಕಾರ ಮುಖಂಡರು ನಿಯೋಗದಲ್ಲಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೀದರ್‌ | ಕಾಂಗ್ರೆಸ್‌ನಿಂದ ಮಾದಿಗ ಸಮುದಾಯದ ಕಡೆಗಣನೆ: ಫರ್ನಾಂಡಿಸ್‌ ಹಿಪ್ಪಳಗಾಂವ್

2‌023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮಾದಿಗ ಸಮುದಾಯದ ಒಬ್ಬರಿಗೂ...