ಜಗದೀಶ್ ಶೆಟ್ಟರ್‌ಗೆ ಕರೆ ಮಾಡಿ ಗಾಳ ಹಾಕಿದ್ರಾ ಸುರ್ಜೇವಾಲಾ?

Date:

  • ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
  • ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ

ಶಾಸಕ ಸ್ಥಾನದಿಂದ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ತನ್ನತ್ತ ಸೆಳೆದುಕೊಳ್ಳಲು ಕಾಂಗ್ರೆಸ್‌ ತೆರೆ ಮರೆಯಲ್ಲಿ ಪ್ರಯತ್ನ ನಡೆಸಿದೆ.

- Advertisement -

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಅವರಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ನೀವು ಕಾಂಗ್ರೆಸ್ಸಿಗೆ ಬನ್ನಿ. ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ” ಎಂದು ಸುರ್ಜೇವಾಲ ಅವರು ಶೆಟ್ಟರ್‌ ಅವರಿಗೆ ಕರೆ ಮೂಲಕ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಸುರ್ಜೇವಾಲ ನೀಡಿರುವ ಆಫರ್‌ ಬಗ್ಗೆ ಶೆಟ್ಟರ್ ಪ್ರತಿಕ್ರಿಯಿಸಿ, “ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಾಗಿಲ್ಲ. ನಮ್ಮ ಕ್ಷೇತ್ರಕ್ಕೆ ಸೂಕ್ತ ಅನುದಾನ ಕಲ್ಪಿಸಿದರೆ ಸಾಕು” ಎನ್ನುವ ಇಂಗಿತ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜಗದೀಶ್‌ ಶೆಟ್ಟರ್‌ ಅವರನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕೆರೆ ತರಲು ಡಿ ಕೆ ಶಿವಕುಮಾರ್‌ ಹೆಸರಲ್ಲಿ ಎರಡು ಹೆಲಿಕಾಪ್ಟರ್‌ ಬುಕ್‌ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸಿ ಕಾಂಗ್ರೆಸ್‌ ಸೇರುವುದು ಖಚಿತವಾದಲ್ಲಿ ಮಧ್ಯಾಹ್ನ ನಂತರ ಬೆಂಗಳೂರಿಗೆ ಶೆಟ್ಟರ್‌ ಆಗಮಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೋಲಾರಕ್ಕೆ ಆಗಮಿಸಿದ್ದು, ಶೆಟ್ಟರ್‌ ಅವರು ಕಾಂಗ್ರೆಸ್‌ ಆಯ್ಕೆ ಮಾಡಿಕೊಂಡಲ್ಲಿ ಈ ಎಲ್ಲ ನಾಯಕರ ಸಮ್ಮುಖದಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್ಸಿಗೆ ಬರುತ್ತಾರೆ ಎಂದರೆ ನಾವು ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ಜಗದೀಶ್‌ ಶೆಟ್ಟರ್‌ ಒಬ್ಬ ಪ್ರಾಮಾಣಿಕ ರಾಜಕಾರಣಿ. ಕಪ್ಪು ಚುಕ್ಕೆ ಇಲ್ಲದೇ ಮುಖ್ಯಮಂತ್ರಿ ಸ್ಥಾನ ನಿಭಾಯಿಸಿದ್ದಾರೆ. ಅವರು ಕಾಂಗ್ರೆಸ್ಸಿಗೆ ಬರುತ್ತಾರೆ ಎಂದರೆ ಸೂಕ್ತ ಸ್ಥಾನಮಾನ ನೀಡಿ ಬರಮಾಡಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲ ಆಯ್ಕೆಗಳು ತೆರೆದಿವೆ. ಕಾಂಗ್ರೆಸ್ ನವರು ತಮ್ಮ ಪ್ರತಿನಿಧಿ ಕಳಿಸಿದ್ದಾರೆ.ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಜಗದೀಶ್‌ ಶೆಟ್ಟರ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...