ಕೆಪಿಎಸ್‌ಸಿ ಫಲಿತಾಂಶದಲ್ಲಿ ಮತ್ತೆ ಅಕ್ರಮದ ಶಂಕೆ: ಒಂದೇ ಕೊಠಡಿಯ 15 ಮಂದಿ ಉತ್ತೀರ್ಣ!

Date:

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿರುವ 2023-24ನೇ ಸಾಲಿನ ಕೆಎಎಸ್ (ಗ್ರೂಪ್ ‘ಎ’ ಮತ್ತು ‘ಬಿ’) ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲಿ ಬೃಹತ್ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿನ್ನೆ ಆಯೋಗವು 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ 15 ಮಂದಿ ಸಂದರ್ಶನಕ್ಕೆ ಆಯ್ಕೆಯಾಗಿರುವುದು ಅಭ್ಯರ್ಥಿಗಳಲ್ಲಿ ತೀವ್ರ ಅನುಮಾನ ಹುಟ್ಟುಹಾಕಿದೆ.

- Advertisement -

ಒಂದೇ ಕೇಂದ್ರದ, ಅದೂ ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದಿದ್ದ 15 ಮಂದಿ ಅಭ್ಯರ್ಥಿಗಳು ಸಾಲಾಗಿ ಸೀರಿಯಲ್ ನಂಬರ್ ಆಧಾರದಲ್ಲಿ ಆಯ್ಕೆಯಾಗಿದ್ದಾರೆ. ಇದು ಕೇವಲ ಕಾಕತಾಳೀಯವಲ್ಲ, ಇದರ ಹಿಂದೆ ದೊಡ್ಡ ಜಾಲವೇ ಅಡಗಿದೆ ಎಂಬುದು ಅಭ್ಯರ್ಥಿಗಳ ದೂರಾಗಿದೆ. ಇದರ ಜೊತೆಗೆ ಒಂದೇ ಕುಟುಂಬದ ಇಬ್ಬರಿಂದ ಮೂವರು ಅಭ್ಯರ್ಥಿಗಳು ಕೂಡ ಸಂದರ್ಶನಕ್ಕೆ ಆಯ್ಕೆಯಾಗಿದ್ದು, ಪ್ರಭಾವಿಗಳ ಮಕ್ಕಳಿಗೆ ಹುದ್ದೆ ಕೊಡಿಸಲು ತೆರೆಯ ಹಿಂದೆ ಕುತಂತ್ರ ನಡೆದಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಪರೀಕ್ಷೆಯನ್ನು ಅತ್ಯುತ್ತಮವಾಗಿ ಬರೆದಿದ್ದರೂ ಆಯ್ಕೆಯಾಗದ ಪ್ರಾಮಾಣಿಕ ಅಭ್ಯರ್ಥಿಗಳು, ಫಲಿತಾಂಶದಲ್ಲಿ ಭಾರಿ ಗೋಲ್‌ಮಾಲ್ ನಡೆದಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಫಲಿತಾಂಶ ಹೊರಬೀಳುತ್ತಿದ್ದಂತೆ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣ ‘X’ (ಟ್ವಿಟರ್) ಮೂಲಕ ದೊಡ್ಡ ಮಟ್ಟದ ಕ್ಯಾಂಪೇನ್ ಆರಂಭಿಸಿದ್ದು, ಪ್ರತಿಯೊಂದು ಪೋಸ್ಟ್ ಹಂಚಿಕೊಂಡು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ನೇಮಕಾತಿಯ ಉನ್ನತ ಸಂಸ್ಥೆಯಾಗಿರುವ ಕೆಪಿಎಸ್‌ಸಿಯಲ್ಲಿ ಪ್ರಾಮಾಣಿಕವಾಗಿ ಓದಿದವರಿಗೆ ಕೆಲಸ ಸಿಗುವ ವಾತಾವರಣವಿಲ್ಲ ಎಂದು ಕಿಡಿಕಾರುತ್ತಿರುವ ವಿದ್ಯಾರ್ಥಿಗಳು, ಕೂಡಲೇ ಈ ಅಕ್ರಮದ ಕುರಿತು ವಿಶೇಷ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

ಕೆಪಿಎಸ್‌ಸಿ ನಡೆಸಿದ ಈ ನೇಮಕಾತಿ ಪ್ರಕ್ರಿಯೆಯು ಮೊದಲಿನಿಂದಲೂ ಎಡವಟ್ಟುಗಳ ಸರಮಾಲೆಯನ್ನೇ ಹೊಂದಿದೆ. 2023-24ನೇ ಸಾಲಿನ ಒಟ್ಟು 384 ಗ್ರೂಪ್‌ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಕ್ಕೆ 2024ರ ಫೆಬ್ರವರಿ 26ರಂದು ಆಯೋಗ ಅಧಿಸೂಚನೆ ಹೊರಡಿಸಿತ್ತು. 2024ರ ಆಗಸ್ಟ್‌ನಲ್ಲಿ ನಡೆದಿದ್ದ ಪ್ರಾಥಮಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಭಾರಿ ಅನುವಾದ ದೋಷಗಳು ಕಂಡುಬಂದು ವಿವಾದವಾದ ಬಳಿಕ ಸರ್ಕಾರ ಆ ಪರೀಕ್ಷೆಯನ್ನು ರದ್ದುಗೊಳಿಸಿತ್ತು.

ನಂತರ 2024ರ ಡಿಸೆಂಬರ್ 29ರಂದು ನಡೆದ ಮರು ಪರೀಕ್ಷೆಯಲ್ಲೂ ಆಯೋಗವು ಅನುವಾದದಲ್ಲಿ ಅದೇ ತಪ್ಪುಗಳನ್ನು ಪುನರಾವರ್ತಿಸಿತ್ತು. ತದನಂತರ 2025ರ ಮೇ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದೀಗ ಪ್ರಕಟವಾಗಿರುವ ಮುಖ್ಯ ಪರೀಕ್ಷೆಯ ಫಲಿತಾಂಶದಲ್ಲೂ ಪ್ರತಿಭಾನ್ವಿತರಿಗೆ ಅನ್ಯಾಯವಾಗಿದೆ ಎಂಬ ಕೂಗು ಎದ್ದಿದ್ದು, ಕೆಪಿಎಸ್‌ಸಿ ಕಾರ್ಯವೈಖರಿಯ ಬಗ್ಗೆ ಮತ್ತೊಮ್ಮೆ ಅನುಮಾನದ ಕಾರ್ಮೋಡ ಕವಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...