₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

Date:

ಫುಡ್ ಡೆಲಿವರಿ ಆ್ಯಪ್ ಬಳಸಿ ಕಳೆದ ವರ್ಷ ಆರ್ಡರ್ ಮಾಡಿದ್ದ ಐಸ್ ಕ್ರೀಂ ಅನ್ನು ಗ್ರಾಹಕರಿಗೆ ಡೆಲಿವರಿ ಮಾಡದ ಸ್ವಿಗ್ಗಿಗೆ ₹5,000 ದಂಡ ವಿಧಿಸಿ ಬೆಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶಿಸಿದೆ ಎಂದು ‘ಬಾರ್ ಆಂಡ್ ಬೆಂಚ್’ ವರದಿ ಮಾಡಿದೆ.

- Advertisement -

2023ರ ಜನವರಿ 26 ರಂದು ಗ್ರಾಹಕರೊಬ್ಬರು ಬೆಂಗಳೂರಿನ ಕ್ರೀಮ್ ಸ್ಟೋನ್ ಐಸ್ ಕ್ರೀಮ್‌ನಿಂದ ಸ್ವಿಗ್ಗಿ ಮೊಬೈಲ್ ಅಪ್ಲಿಕೇಶನ್ ಬಳಸಿಕೊಂಡು ‘ನಟ್ಟಿ ಡೆತ್ ಬೈ ಚಾಕೊಲೇಟ್’ (Nutty Death by Chocolate) ಎಂಬ ಐಸ್ ಕ್ರೀಮ್ ಅನ್ನು ಆರ್ಡರ್ ಮಾಡಿದ್ದರು. ಆದರೆ, ಐಸ್‌ ಕ್ರೀಂ ಅನ್ನು ಗ್ರಾಹಕರಿಗೆ ತಲುಪಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಐಸ್ ಕ್ರೀಂ ಅನ್ನು ಡೆಲಿವರಿ ಮಾಡದಿದ್ದರೂ, ಡೆಲಿವರಿ ಏಜೆಂಟ್ ಡೆಲಿವರಿ ಮಾಡುವ ವಸ್ತುವನ್ನು ತೆಗೆದುಕೊಂಡ ನಂತರ ಸ್ವಿಗ್ಗಿ ಆ್ಯಪ್‌ನಲ್ಲಿ ಸ್ಟೇಟಸ್ ಅನ್ನು ‘ಡೆಲಿವರಿ ಮಾಡಲಾಗಿದೆ’ ಎಂದು ತೋರಿಸಲಾಗಿದೆ.

ಈ ಬಗ್ಗೆ ಗ್ರಾಹಕರು ಸ್ವಿಗ್ಗಿಗೆ ಕರೆ ಮಾಡಿ ಹಣ ಪಾವತಿ ಮಾಡುವಂತೆ ಹೇಳಿದ್ದಾರೆ. ಆದರೆ, ಮರುಪಾವತಿ ಮೊತ್ತವನ್ನು ಸ್ವಿಗ್ಗಿ ಪಾವತಿಸದ ಕಾರಣ ಗ್ರಾಹಕರು ಪರಿಹಾರಕ್ಕಾಗಿ ನಗರದ ಗ್ರಾಹಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

“ಆರ್ಡರ್ ಮಾಡಿದ ಉತ್ಪನ್ನವನ್ನು ತಲುಪಿಸದೇ, ಗ್ರಾಹಕರು ಪಾವತಿಸಿದ ಮೊತ್ತವನ್ನು ಸ್ವಿಗ್ಗಿ ಹಿಂತಿರುಗಿಸಿಲ್ಲ. ಇದು ಸ್ವಿಗ್ಗಿಯ ಸೇವಾ ಕೊರತೆ ಎಂದು ದೂರುದಾರರು ಸಾಬೀತುಪಡಿಸಿದ್ದಾರೆ. ಇದನ್ನು ನಾವು ಪರಿಗಣಿಸುತ್ತೇವೆ. ಇದು ಸೇವೆಯ ಕೊರತೆ ಮತ್ತು ಅನ್ಯಾಯದ ವ್ಯಾಪಾರದ ಅಭ್ಯಾಸಕ್ಕೆ ಸಮನಾಗಿದೆ” ಎಂದು ಗ್ರಾಹಕರ ವೇದಿಕೆ ಹೇಳಿದೆ.

ಬೆಂಗಳೂರು ನಗರ II ಹೆಚ್ಚುವರಿ ಜಿಲ್ಲಾ ಗ್ರಾಹಕ ಪರಿಹಾರ ಆಯೋಗ, ಐಸ್ ಕ್ರೀಮ್ ಅನ್ನು ಆರ್ಡರ್ ಮಾಡುವಾಗ ಗ್ರಾಹಕರು ಪಾವತಿಸಿದ ₹187 ಮರುಪಾವತಿಸುವಂತೆ ಸ್ವಿಗ್ಗಿಗೆ ತಿಳಿಸಿದೆ.

ಸ್ವಿಗ್ಗಿ ತನ್ನ ಡೆಲಿವರಿ ಏಜೆಂಟ್ ಮಾಡಿದ ಯಾವುದೇ ರೀತಿಯ ತಪ್ಪಿಗೆ ಜವಾಬ್ದಾರನಾಗಿರುವುದಿಲ್ಲ ಎಂದು ಹೇಳಿದೆ ವಿಶೇಷವಾಗಿ ಅಪ್ಲಿಕೇಶನ್‌ನಲ್ಲಿ ಡೆಲಿವರಿ ಎಂದು ಗುರುತಿಸಿದ ನಂತರ ಆರ್ಡರ್ ಅನ್ನು ಡೆಲಿವರಿ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸ್ಥಿತಿಯಲ್ಲಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

ಪ್ರಕರಣದ ವಿಚಾರಣೆ ವೇಳೆ, ಅಧ್ಯಕ್ಷ ವಿಜಯಕುಮಾರ್ ಎಂ ಪಾವಲೆ, ವಿ ಅನುರಾಧ ಮತ್ತು ರೇಣುಕಾದೇವಿ ದೇಶಪಾಂಡೆ ಅವರನ್ನೊಳಗೊಂಡ ಪೀಠವು ಮರುಪಾವತಿಗಾಗಿ ಗ್ರಾಹಕರು ನೀಡಿದ ಕಾನೂನು ನೋಟಿಸ್‌ಗೆ ಪ್ರತಿಕ್ರಿಯಿಸಲು ಸ್ವಿಗ್ಗಿ ವಿಫಲವಾಗಿದೆ ಎಂದು ಹೇಳಿದರು.

ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಸ್ವಿಗ್ಗಿಯ ವಾದವನ್ನು ಗ್ರಾಹಕ ನ್ಯಾಯಾಲಯವು ತಿರಸ್ಕರಿಸಿದೆ. ಈ ವಿನಾಯಿತಿಯು ಮಾಹಿತಿಯ ಪ್ರಸಾರಕ್ಕೆ ಸೀಮಿತವಾಗಿದೆ. ಇದು ಸರಕು ಮತ್ತು ಸೇವೆಗಳ ಮಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ಪೀಠವು ಹೇಳಿದೆ.

ಸೇವೆಯ ಕೊರತೆ ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸಗಳಿಗಾಗಿ ಸ್ವಿಗ್ಗಿ ವಿರುದ್ಧದ ಆರೋಪಗಳು ಸಾಬೀತಾಗಿದೆ ಎಂದು ಗ್ರಾಹಕ ನ್ಯಾಯಾಲಯವು ತೀರ್ಮಾನಿಸಿದೆ.

ಗ್ರಾಹಕರು ಪರಿಹಾರವಾಗಿ ₹ 10,000 ಮತ್ತು ವ್ಯಾಜ್ಯ ವೆಚ್ಚವಾಗಿ ₹ 7,500 ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಆದರೆ, ಗ್ರಾಹಕ ನ್ಯಾಯಾಲಯ ಗ್ರಾಹಕರಿಗೆ ₹187, ಪರಿಹಾರವಾಗಿ ₹3,000 ಮತ್ತು ₹2,000 ಹಣವನ್ನು ವ್ಯಾಜ್ಯ ಶುಲ್ಕವಾಗಿ ಮರುಪಾವತಿ ಮಾಡುವಂತೆ ಸ್ವಿಗ್ಗಿಗೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...