ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

Date:

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್‍ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು ಮುಂದಾಗಿದೆ.

ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದ್ದು, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ ಹಾಕಿದೆ.

ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ ಮ್ಯಾನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್‌ ಮ್ಯಾನ್ ಮೂಲಕ ಕೇವಲ ₹70 (ಜಿಎಸ್‍ಟಿ ಸೇರಿದಂತೆ) ಶುಲ್ಕ ನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ತಿಳಿಸಿದೆ.

ತಿಳಿವಳಿಕೆ ಪತ್ರದ (ಎಂಒಯು) ಅಡಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನವೆಂಬರ್ 1 ರಿಂದ 30 ರವರೆಗಿನ ಮಸ್ಟರಿಂಗ್ ಅವಧಿಯಲ್ಲಿ 5.4 ಲಕ್ಷಕ್ಕೂ ಅಧಿಕ ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೇವೆಗಳನ್ನು ಒದಗಿಸುತ್ತದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅನ್ನು 2018ರ ಸೆಪ್ಟೆಂಬರ್ 1ರಂದು ರಾಷ್ಟ್ರವ್ಯಾಪಿ ಪ್ರಾರಂಭಿಸಲಾಯಿತು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ನ ಸೇವೆಗಳು ಈಗಾಗಲೇ ಸೇರ್ಪಡೆಗೊಂಡಿರುವ 8 ಕೋಟಿಗೂ ಹೆಚ್ಚು ಗ್ರಾಹಕರಿಗೆ ಹಾಗೂ ಇನ್ನಿತರರಿಗೆ ದೇಶಾದ್ಯಂತ 1,36,000 ಅಂಚೆ ಕಚೇರಿಗಳ ಮೂಲಕ ಲಭ್ಯವಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

ಕರ್ನಾಟಕದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ 31 ಶಾಖೆಗಳನ್ನು ಹೊಂದಿದ್ದು, ಅದರ ಜೊತೆಗೆ 9,500ಕ್ಕೂ ಹೆಚ್ಚು ಪೋಸ್ಟ್‌ ಮ್ಯಾನ್‍ಗಳು ಅವರ ದೈನಂದಿನ ಡೆಲಿವರಿ ಬೀಟ್‍ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್ ಪೋನ್ ಮತ್ತು ಬಯೋಮೆಟ್ರಿಕ್ ಸಾಧನಗಳನ್ನು ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸರಕಾರದ ವತಿಯಿಂದ ಕೊಡುವ ಪೆನ್ಷನ್ ಗೆ life ಸರ್ಟಿಫಿಕೇಟ್ ಕೆಲುವುದರಲ್ಲಿ ಅರ್ಥವಿದೆ. ಅಧಿಕಾರಿಗಳು ವಾಟ್ಸ್ ಆಪ್ ಮೂಲಕ ಅಥವಾ ಪೆನ್ಷನೆರ್ ಸ್ವತಃ ವಿಡಿಯೋ ಕಾಲ್ ಮಾಡಿ ಲೈಫ್ certificate ಕೊಡಬಹುದು. ವಿಡಿಯೋ ವನ್ನು ರೆಕಾರ್ಡ್ ಮಾಡಿ referance ಇಟ್ಟು ಕೊಳ್ಳಬಹುದು. ಪೋಸ್ಟ್ ಆಫೀಸ್ ಬೇಕಾಗಿಲ್ಲ. ಬಟ್ಟಿ ನಲ್ಲಿ ವಯಸ್ಸಾದ ಮೇಲೆ ಗೆರೆನೆ ಇರಲ್ಲ. 100 ರಲ್ಲಿ ಒಂದು mistake ಗೆ ಸಿಸ್ಟಮ್ ಚೇಂಜ್ ಮಾಡೋ ಅವಶ್ಯಕತೆ ಇಲ್ಲ. ಪ್ರತಿ ವರ್ಷ ನಾನು ಬದುಕಿದ್ದೆನೆ ಎಂದು ಪ್ರೂಫ್ ಕೊಡಿ ಅಂದರೆ ? 70 ವರ್ಷದ ವ್ಯಕ್ತಿ ತೊಡಕಾದ ಪರಿಸ್ಥಿತಿ ಇರುತ್ತೆ. ಈಗ ಸುಲಭ ಸಲಹೆ ಬೇಡ. ಈಗ insurance annuity ಮತ್ತು EPS 95 ಅವರು ಸಹ ಇದೇ ಗೋಳು. ಸ್ವಾಮಿ ನನ್ನ ಹಣ !! ಬಡ್ಡಿ ಬದಲು pension ಅಂತ ಕರೆಯುತ್ತಿರಿ. ನನ್ನ ಹಣದ ಮೇಲೆ ಕೊಡುವ ಹಣಕ್ಕೂ life certificate ಬೇಕೇ?. ಎಂತಹ ವಿಚಿತ್ರ ? FD, savings ಮೇಲೆ ಬಡ್ಡಿಗೆ ಲೈಫ್ certificate ಇಲ್ಲಾ ಅಲ್ಲವಾ ? ನಾವೇ ಡೆಪಾಸಿಟ್ ಮಾಡಿದ ಹಣ ಅಲ್ಲವಾ ?. ಮೊದಲು ಬ್ಯಾಂಕ್ ಗೆ ಒಂದು ಫಾರಂ ಕೊಟ್ಟರೆ ಆಗುತಿತ್ತು. ಅಂದರೆ ನಿಮಗೆ ಹೇಬ್ಬತ್ತು ಏಕೆ ?. ಮೊಬೈಲ್ ನಲ್ಲಿ ವಿಡಿಯೋ ಕಾಲ್ ಉಪಯೋಗ ಮಾಡಿ ಬಹಳ ಅನುಮಾನ ಇದ್ದರೆ. ಸುಮ್ಮನೆ ತೊಂದರೆ ಬೇಡ. ಈಗ hebbattina fraud ಆಗುತ್ತೈವೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಲು ‘ಸಂವಾದ’ ಫೌಂಡೇಶನ್‌ಗೆ ಏನು ಆಸಕ್ತಿ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬಗ್ಗೆ ಖಾಸಗಿ ಎಫ್‌ಎಸ್‌ಎಲ್‌...

2032ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ಗಾತ್ರ: ಎಂ ಬಿ ಪಾಟೀಲ್‌ ಭರವಸೆ

ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ...

ಗುತ್ತಿಗೆದಾರರಿಂದ ಐದು ಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್...