ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

Date:

ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಮಂಗಳವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಸಮಸ್ಯೆ ಆಗಲಿದೆಯೇ ಎಂಬುದನ್ನು ಪರಿಶೀಲಿಸಬೇಕು. ಏನಾದರು ಸಮಸ್ಯೆ ಇದ್ದಲ್ಲಿ ಮೆಟ್ರೋ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು. ನಗರದಲ್ಲಿ ಜೋರು ಮಳೆಯಾಗುವ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್‌ಗಳ ಬಳಿ ಸ್ವಚ್ಚತೆ ಕಾಪಾಡಬೇಕು” ಎಂದು ಸೂಚಿಸಿದರು.

“ಪಾಲಿಕೆ 8 ವಲಯಗಳು ಹಾಗೂ ಕೇಂದ್ರ ಕಚೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಜತೆಗೆ ಮಳೆಗಾಲದ ವೇಳೆ ತಾತ್ಕಾಲಿಕವಾಗಿ 63 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿಕೊಂಡು, ಅಗತ್ಯವಿರುವ ಪಂಪ್‌ಸೆಟ್, ಸಲಕರಣೆಗಳು, ಗ್ಯಾಂಗ್ಸ್‌ಗಳನ್ನು ಸನ್ನದ್ಧ್ದವಾಗಿಟ್ಟುಕೊಳ್ಳಬೇಕು” ಎಂದು ಸೂಚಿಸಿದರು.

“ನಗರದಲ್ಲಿ ಮಳೆಗಾಲದ ವೇಳೆ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ 28 ತಂಡಗನ್ನು ಕಾರ್ಯನಿರ್ವಹಿಸುತ್ತಿವೆ. ಅದರ ಜತೆಗೆ ಹೆಚ್ಚುವರಿಯಾಗಿ 6 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅದಲ್ಲದೇ ರಸ್ತೆಗಳಲ್ಲಿ ಬಿದ್ದಂತಹ ಮರಗಳನ್ನು ಕೂಡಲೇ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತದೆ. ಮರ, ರೆಂಬೆ/ಕೊಂಬೆ ತೆರವು ಕಾರ್ಯಾಚರಣೆಗಾಗಿ 8 ಟ್ರ್ಯಾಕ್ಟರ್, 2 ಜೆಸಿಬಿ, 2 ಕ್ರೇನ್, ಅವಶ್ಯಕ ಸಲಕರಣೆಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಬಿದ್ದಂತಹ ಮರ, ರೆಂಬೆ-ಕೊಂಬೆಗಳ ವಿಲೇವಾರಿಗಾಗಿ ಆಯಾ ವಲಯಗಳಲ್ಲಿ ಡಂಪಿಂಗ್ ಯಾರ್ಡ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು” ಎಂದು ಉಪ ಅರಣ್ಯ ಸಂರಕ್ಷಾಧಿಕಾರಿಗೆ ಸೂಚನೆ ನೀಡಿದರು.

“ಮಳೆಗಾಲದ ವೇಳೆ ಪಾಲಿಕೆಯ ಜೊತೆ ಅಗ್ನಿ ಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳು ಕೈಜೋಡಿಸಲಿದ್ದಾರೆ. ಈ ಸಂಬಂಧ ಆಯಾ ವಲಯ ಆಯುಕ್ತರು ಅಗ್ನಿ ಶಾಮಕ ಠಾಣೆ ಸ್ಥಳಗಳಿಗೆ ಭೇಟಿ ನೀಡಿ ಸದರಿ ಇಲಾಖೆಗಳ ಜೊತೆ ನಿತ್ಯ ಸಂಪರ್ಕದಲ್ಲಿರಬೇಕು. ತುರ್ತು ಪರಿಸ್ಥಿತಿಯ ವೇಳೆ ಸದರಿ ಇಲಾಖೆಗಳ ಸಹಾಯ ಪಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೆಂದು” ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಟ್ ಕಾಯಿನ್ ಹಗರಣ | ವಿಚಾರಣೆಗೆ ಗೈರಾಗಿದ್ದ ಪ್ರಮುಖ ಆರೋಪಿ ಶ್ರೀಕಿ ಬಂಧನ

“ಸಮಸ್ಯೆಗೆ ಕೂಡಲೆ ಸ್ಪಂದಿಸುವ ನಿಟ್ಟಿನಲ್ಲಿ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸ್‌ಆಪ್ ಗ್ರೂಪ್‌ಗಳನ್ನು ರಚಿಸಿಕೊಂಡು, ಅದರ ಮೂಲಕ ಬಂದಂತರ ದೂರು, ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು” ಎಂದು ಸೂಚನೆ ನೀಡಿದರು.

“ನಗರದ ರಸ್ತೆ ಬದಿ, ಇಕ್ಕೆಲಗಳಲ್ಲಿ, ರಾಜಕಾಲುವೆಗಳಲ್ಲಿ/ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಈ ಸಂಬಂಧ ಕಟ್ಟಡ ಭಗ್ನಾವಶೇಷಗಳ ವಿಲೇವಾರಿ ಮಾಡುವವರ ಮೇಲೆ ಘನತ್ಯಾಜ್ಯ ವಿಭಾಗವು ಸಕ್ರಿಯವಾಗಿ ನಿಗಾವಹಿಸಿ ಅನಧಿಕೃತ ಸ್ಥಳದಲ್ಲಿ ಸುರಿಯದಂತಹವರಿಗೆ ದಂಡ ವಿಧಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಎಲ್ಲ ವಲಯ ಆಯುಕ್ತರು, ಎಲ್ಲ ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಎಲ್ಲ ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...