ಮೈಸೂರು ಸ್ಯಾಂಡಲ್‌ ಸೋಪ್‌ಗೆ ರಾಯಭಾರಿಯಾದ ತಮನ್ನಾ ಭಾಟಿಯಾ

Date:

“ಮೈಸೂರು ಸ್ಯಾಂಡಲ್‌ ಸೋಪ್‌ಗೆ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವವರು ರಾಯಭಾರಿ ಆಗಬೇಕು ಎಂಬ ಉದ್ದೇಶದಿಂದ, ಇನ್‌ಸ್ಟಾಗ್ರಾಂನಲ್ಲಿ 28.5 ಮಿಲಿಯನ್‌ ಬೆಂಬಲಿಗರನ್ನು (ಪಾಲೋವರ್ಸ್‌) ಹೊಂದಿರುವ ಬಹುಭಾಷಾ ತಾರೆ ತಮನ್ನಾ ಭಾಟಿಯ ಅವರನ್ನು ಆಯ್ಕೆ ಮಾಡಿದ್ದೇವೆ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

- Advertisement -

ಬೆಂಗಳೂರು ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ʼರಾಯಭಾರಿ ಅನಾವರಣ ಹೊಸ ರೂಪದ ವಿಜೃಂಭಣೆʼ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೈಸೂರು ಸ್ಯಾಂಡಲ್‌ ಸೋಪ್‌ ಸೇರಿದಂತೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಸಂಸ್ಥೆಯ ಅನೇಕ ಉತ್ಪನಗಳಿಗೆ ಇಂದಿನಿಂದ ಬಹುಭಾಷಾ ನಟಿ ತಮನ್ನಾ ಭಾಟಿಯಾ ರಾಯಭಾರಿ ಎಂದು ಘೋಷಿಸಿದರು.

“ಪ್ರಸ್ತುತ 1,777 ಕೋಟಿ ರೂಪಾಯಿ ವಹಿವಾಟನ್ನು ಮಾಡಿ, 450 ಕೋಟಿ ರೂಪಾಯಿ ಲಾಭವನ್ನು ಕೆಎಸ್‌ಡಿಎಲ್‌ ಸಂಸ್ಥೆ ಪಡೆದಿದೆ. ಆದ್ದರಿಂದ, ಆಧುನಿಕ ಸ್ಪರ್ಷವನ್ನು ಕೊಡುವ ಉದ್ದೇಶದಿಂದ ಹೊಸ ರೀತಿಯ ಪ್ಯಾಕ್‌ಗಳನ್ನು ತಯಾರು ಮಾಡಿದ್ದೇವೆ. ಜೊತೆಗೆ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರು ಸ್ಯಾಂಡಲ್‌ ಸೋಪನ್ನು ಕೊಂಡ್ಯೊಯುವ ಪ್ರಯತ್ನವನ್ನು ಮಾಡುತ್ತಿದ್ದೇವೆ” ಎಂದರು.

MD 1

“ಸೋಪಿನ ಜೊತೆಗೆ ಸೌಂದರ್ಯ ಉತ್ಪನ್ನಗಳು ಮತ್ತು ಗೃಹ ಉಪಯೋಗಿ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಕೆಎಸ್‌ಡಿಎಲ್‌ ಸಂಸ್ಥೆಯಿಂದ ಒಟ್ಟು 93 ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿವೆ. 2030ರ ವೇಳೆಗೆ 5 ಸಾವಿರ ಕೋಟಿ ವಹಿವಾಟನ್ನು ತಲುಪುವ ಗುರಿ ಹಾಕಿಕೊಂಡಿದ್ದೇವೆ” ಎಂದು ಭರವಸೆ ವ್ಯಕ್ತಪಡಿಸಿದರು.

“ಸುಗಂಧ ದ್ರವ್ಯ ಕ್ಷೇತ್ರದಲ್ಲಿಯೂ ಹೆಜ್ಜೆ ಇಡುತ್ತಿದ್ದೇವೆ. ಸುಗಂಧ ದ್ರವ್ಯದ ರಾಜಧಾನಿ ಎಂದೇ ಖ್ಯಾತವಾಗಿರುವ ಕನೌಜ್‌ಗೆ ಹೋಗಿ ಅಧ್ಯಯನ ಮಾಡಲಾಗಿದೆ. ಅದರಂತೆ ಪ್ರೀಮಿಯಂ, ಮಧ್ಯಮ ಮತ್ತು ಸಾಧರಣ ಮಟ್ಟದಲ್ಲಿ ಮೂರು ತರದ ಸುಗಂಧ ದ್ರವ್ಯವನ್ನು ತರಲಾಗುತ್ತಿದೆ” ಎಂದು ಹೇಳಿದರು.

“ಮೈಸೂರು ಸ್ಯಾಂಡಲ್‌ ಸೋಪ್‌ ದೇಶದ ಹೆಮ್ಮೆಯ ಸಂಸ್ಥೆಯಾಗಿದೆ. ಇದನ್ನು ಕಟ್ಟಿ ಬೆಳೆಸಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌, ಮೈಸೂರು ದಿವಾನರಾಗಿದ್ದ ಸರ್‌ ಎಂ.ವಿಶ್ವೇಶ್ವರಯ್ಯ, ಇವರ ಜೊತೆಗೆ ಸಂಸ್ಥೆಯ ಬೆಳವಣಿಗಾಗಿ ಶ್ರಮಿಸಿದ ಕಾರ್ಮಿಕರ ಕೊಡೆಗೆಯೂ ಸಾಕಷ್ಟಿದೆ” ಎಂದು ಸ್ಮರಿಸಿದರು.

ಎಂ ಬಿ ಪಾಟೀಲ್ 14

ಪದೇ ಪದೇ ತಮನ್ನಾ ಭಾಟಿಯ ಅವರಿಗೆ 3 ಕೋಟಿಯ ವರೆಗೆ ಇನ್ಸ್ಟಾಗ್ರಾಂ ಬೆಂಬಲಿಗರು ಇದ್ದಾರೆ ಎಂದು ಉಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷರಾದ ಸಿ.ಎಸ್‌.ಅಪ್ಪಾಜಿ ನಾಡಗೌಡ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಡಾ. ಎಸ್. ಸೆಲ್ವಕುಮಾರ್, ಕೆಎಸ್‌ಡಿಎಲ್‌ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪಿ.ಕೆ.ಪ್ರಶಾಂತ್‌ ಮತ್ತಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...