ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 5 ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ: ಸಿಎಂ ಸಿದ್ದರಾಮಯ್ಯ

Date:

ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಸಹಿ ಹಾಕಿದ ನಂತರ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್ ತೆರಿಗೆ ಇಳಿಸಿ ವರ್ಷಗಳ ನಂತರ ಉದ್ಯಮಿಗಳಿಗೆ ಪ್ರಶ್ನೆಯೇ;...

​ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಿ ಸರ್ಕಾರಗಳು ನೀಡುವ ತೆರಿಗೆ ವಿನಾಯಿತಿಗಳ ಲಾಭವು ತಳಮಟ್ಟದ ಕಾರ್ಮಿಕರ ವೇತನ ಹೆಚ್ಚಳವಾಗಿ ಪರಿವರ್ತನೆಯಾಗದಿರುವುದು ಆರ್ಥಿಕ ನೀತಿ ನಿರೂಪಕರ ಮುಂದಿರುವ ದೊಡ್ಡ ಸವಾಲಾಗಿದೆ. ಫಿಕ್ಕಿ ವೇದಿಕೆಯಲ್ಲಿ ಪ್ರಧಾನಿಯವರು ಎತ್ತಿರುವ ಪ್ರಶ್ನೆಗಳು...

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು:...

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ ಕುಸಿದರೆ ಅರಣ್ಯದ ಜೀವನಾಡಿಗಳೇ ದುರ್ಬಲವಾಗುತ್ತವೆ. ಇದರ ಪರಿಣಾಮ ಮನುಷ್ಯರಿಗಷ್ಟೇ ಸೀಮಿತವಾಗುವುದಿಲ್ಲ. ಕಾಡಿನಲ್ಲಿರುವ ಆನೆ, ಹುಲಿ, ಚಿರತೆ, ಕಾಡೆಮ್ಮೆ, ಜಿಂಕೆ ಸೇರಿದಂತೆ...

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಗಳ ಆರೋಗ್ಯ ಸಂಬಂಧಿಸಿದಂತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ ಎಂದರು.

ಪ್ರೇಮ್ ಜಿ ಪ್ರತಿಷ್ಠಾನಕ್ಕೆ ಸರ್ಕಾರ ಆಭಾರಿ
ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಶಿಕ್ಷಣಕ್ಕೆ ನೆರವು
ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024 ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ ನೀಡುವ ಮೂಲಕ ಕೈಜೋಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಜೀಂ ಪ್ರೇಮ್ ಜಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಸಾರ್ವಜನಿಕ ವ್ಯವಸ್ಥೆಗಳು ಬಲಗೊಳ್ಳಬೇಕು
ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಗ್ ಬೆಹರ್ , ಸಾರ್ವಜನಿಕ ವ್ಯವಸ್ಥೆಗಳಲ್ಲಿ ನಂಬಿಕೆಯಿಟ್ಟಿರುವ ಸಂಸ್ಥೆಯಾಗಿದ್ದು, ಸಾರ್ವಜನಿಕ ವ್ಯವಸ್ಥೆಗಳು ಬಲಗೊಳ್ಳಬೇಕು ಎಂದರು. ಆರೋಗ್ಯ ಶುರುವಾಗುವುದು ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ. ನಮ್ಮ ಜನತೆ ಖಾಯಿಲೆ ಬೀಳದಿರುವಂತೆ ತಡೆಯುವುದು ನಮ್ಮ ಮುಖ್ಯ ಗುರಿಯಾಗಬೇಕು. ಕರ್ನಾಟಕ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಆರೋಗ್ಯ ವ್ಯವಸ್ಥೆಯನ್ನು ಬಲಬಡಿಸುವಲ್ಲಿ ಅಧಿಕಾರಿಗಳು, ಆಡಳಿತ ಒಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜ್ಞಾನ ಜಗತ್ತಿನ ಅಮೂಲ್ಯ ವಿಜ್ಞಾನಿ- ಪ್ರೊ. ಅಮೂಲ್ಯ ಕುಮಾರ್ ರೆಡ್ಡಿ

ಭಾರತೀಯ ವಿಜ್ಞಾನದ ಆಸಕ್ತರಿಗೆ ಪರಿಚಯ ಇರಲೇಬೇಕಾದ ಹಾಗೂ ವಿಜ್ಞಾನವನ್ನು ಪ್ರಯೋಗಾಲಯದಿಂದ ಆಚೆ...

ಎನ್‌ವಿಡಿಯಾ ಗೂಢಚರ್ಯೆ ಭೀತಿ: ಚೀನಾದ ಮೇಲಿನ ಚಿಪ್ ದಿಗ್ಬಂಧನ ವಿಫಲ, ಒಳಜಗಳಕ್ಕೆ ಇಳಿದ ಅಮೆರಿಕದ ಆಡಳಿತ ವರ್ಗ

ನವೆಂಬರ್ 18-19ರಂದು ಚೀನಾದ ಶೆನ್‌ಜೆನ್‌ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಟ್ರಂಪ್ ಚೀನಾ ಅಧ್ಯಕ್ಷ...

ಹೊಸ ಓದು | ಶ್ರೀನಿವಾಸರಾಜು ದೊಡ್ಡೇರಿ ಅವರ ‘ಬಾಬಾ ಸಾಹೇಬ್’

ಕನ್ನಡದ ಅಪರೂಪದ ಬರಹಗಾರ, ಅನುವಾದಕರಾದ ಶ್ರೀನಿವಾಸರಾಜು ದೊಡ್ಡೇರಿ ಅವರು ಅನುವಾದಿಸಿರುವ 'ಬಾಬಾ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸಹಕರಿಸಬೇಕು: ಡಿಕೆಶಿ

"ತಮಿಳುನಾಡಿನ 177 ಟಿಎಂಸಿ ನೀರಿನ ಹಕ್ಕಿನ ರಕ್ಷಣೆಯ ಜೊತೆಗೆ ಕರ್ನಾಟಕದ ಹಿತಾಸಕ್ತಿ...