ಮುಸ್ಲಿಂ ಸಮುದಾಯಕ್ಕೆ ಕೊಡುತ್ತಿದ್ದ ಶೇ.4 ಮೀಸಲಾತಿ ಸಂವಿಧಾನಬಾಹಿರ: ತೇಜಸ್ವಿ ಸೂರ್ಯ

Date:

  • ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತಂದಿದೆ
  • ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಿಸುತ್ತಿದೆ

ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಲಾಗಿದೆ. ಇದನ್ನು ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಶೇ.4 ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಅಚ್ಚರಿ ತಂದಿದೆ ಎಂದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಸರ್ಕಾರ ಇಲ್ಲಿವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಮುಂದಾಗಿದೆ ಎಂದರು.

ನಿರಂತರವಾಗಿ ಕಾಂಗ್ರೆಸ್ ಒಬಿಸಿ ಸಮುದಾಯಗಳ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದೆ. ಈಗ ನಮ್ಮ ಸರ್ಕಾರದ ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ನಡೆ ಅಸಹ್ಯ ತರಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿ ಕೈವಾಡ: ಸಿದ್ದರಾಮಯ್ಯ

ಶೇ.13ರಷ್ಟು ಮುಸ್ಲಿಂ ಸಮುದಾಯ ರಾಜ್ಯದಲ್ಲಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ. ಇದನ್ನು ರಾಜ್ಯದ ಜನತೆ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಎಚ್ಚರಿಸಿದರು.

ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳನ್ನು ಕಾಂಗ್ರೆಸ್ ನಿರಾಕರಣೆ ಮಾಡುತ್ತಿದೆ. ಅಲ್ಲದೆ ಈ ಸಮುದಾಯದ ಹಕ್ಕು, ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಿ ತುಷ್ಟೀಕರಣ ಮಾಡುತ್ತಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಮತ್ತು ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಮಾಡಿದ್ದಾರೆ ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...