ರಾಜ್ಯದಾದ್ಯಂತ ತಾಪಮಾನ ಹೆಚ್ಚಳ; ಮಳೆ ಮುನ್ಸೂಚನೆ ಸದ್ಯಕ್ಕಿಲ್ಲ

Date:

Advertisements

“ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ತಾಪಮಾನ ಹೆಚ್ಚಳ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ” ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು.

ಈ ಬಗ್ಗೆ ಈದಿನ.ಕಾಮ್‌ ಜತೆಗೆ ಮಾತನಾಡಿದ ಅವರು, “ಮುಂದಿನ ಒಂದು ವಾರದ ಮಟ್ಟಿಗೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಅಲ್ಲದೇ, ಈ ಮಾರ್ಚ್‌ ತಿಂಗಳ ಕೊನೆಯಲ್ಲಿ ಒಂದು ದಿನದ ಮಟ್ಟಿಗೆ ಮಳೆಯಾಗುವ ಅನುಮಾನ ಇದೆ. ಅದನ್ನು ಈಗಲೇ ಖಚಿತವಾಗಿ ಹೇಳಲು ಆಗುವುದಿಲ್ಲ. ಸದ್ಯ ಬೆಂಗಳೂರಿನಲ್ಲಿ 34 ರಿಂದ 36 ಡಿಗ್ರಿ ಸೆಲ್ಸಿಯಸ್ ವರೆಗೂ ತಾಪಮಾನ ದಾಖಲಾಗಿದೆ. ಆದರೆ, 36 ಡಿಗ್ರಿ ಸೆಲ್ಸಿಯಸ್ ಮೇಲೆ ತಾಪಮಾನ ಮುಂದಿನ ದಿನಗಳಲ್ಲಿ ಹೋಗುವುದಿಲ್ಲ. ಈ ಹಿಂದೆಯೂ ನಗರದಲ್ಲಿ ಸೇರಿದಂತೆ ರಾಜ್ಯದಾದ್ಯಂತ 36 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗಿದೆ” ಎಂದರು.

“ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ” ಎಂದು ಹೇಳಿದರು.

Advertisements
  • 2012ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 35.6 ಡಿಗ್ರಿ ಸೆಲ್ಸಿಯಸ್, 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2013ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 36.6 ಡಿಗ್ರಿ ಸೆಲ್ಸಿಯಸ್, 36.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2014ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 36 ಡಿಗ್ರಿ ಸೆಲ್ಸಿಯಸ್, 36.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2015ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 35.8 ಡಿಗ್ರಿ ಸೆಲ್ಸಿಯಸ್, 36.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2016ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 36.3 ಡಿಗ್ರಿ ಸೆಲ್ಸಿಯಸ್, 37.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2017ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 37.2 ಡಿಗ್ರಿ ಸೆಲ್ಸಿಯಸ್, 36.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2018ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 35.1 ಡಿಗ್ರಿ ಸೆಲ್ಸಿಯಸ್, 34.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2019ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 37 ಡಿಗ್ರಿ ಸೆಲ್ಸಿಯಸ್, 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2020ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 36.1 ಡಿಗ್ರಿ ಸೆಲ್ಸಿಯಸ್, 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2021ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 35.9 ಡಿಗ್ರಿ ಸೆಲ್ಸಿಯಸ್, 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2022ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 35.3 ಡಿಗ್ರಿ ಸೆಲ್ಸಿಯಸ್, 36.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
  • 2023ರಲ್ಲಿ ಮಾರ್ಚ್‌ ಮತ್ತು ಏಪ್ರಿಲ್ ತಿಂಗಳಿನಲ್ಲಿ ಸರಾಸರಿ 35.5 ಡಿಗ್ರಿ ಸೆಲ್ಸಿಯಸ್, 36.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು 2024ರ ಫೆಬ್ರುವರಿ ತಿಂಗಳಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಇನ್ನುಳಿದಂತೆ ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉಸಿರುಗಟ್ಟಿಸಿ ವಿದೇಶಿ ಮಹಿಳೆ ಕೊಲೆ; ಶಂಕೆ

ಮುಂದಿನ ದಿನದಲ್ಲಿ ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಬಿಸಿಲ ಧಗೆ ಹೆಚ್ಚಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶವು 40 ಡಿಗ್ರಿ ಸೆಲ್ಸಿಯಸ್ ಗಡಿದಾಟಲಿದೆ ಎಂದು ಅಂದಾಜಿಸಲಾಗಿದೆ.

ಇತ್ತಕಡೆ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಕೊಡಗಿನ ಹಲವೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಅಲ್ಲದೇ, ಬುಧವಾರ ಮಧ್ಯಾಹ್ನ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲುವಿನಲ್ಲಿ ಕಾಕೋಟು, ಪರಂಬು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

ಮಾರ್ಚ್ 20ರ ನಂತರ ಮಡಿಕೇರಿಯ ಹಲವು ಕಡೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X