ಹೊಸ ಮಾರ್ಗಸೂಚಿ ಪ್ರಕಟವಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಸಚಿವ ಈಶ್ವರ್​ ಖಂಡ್ರೆ

Date:

Advertisements

ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಟಿಪ್ಪಣಿ ಹೊರಡಿಸಿರುವ ಸಚಿವರು, ಈ ಮೂಲಕ ಅನಧಿಕೃತ ಚಾರಣಕ್ಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

“ಆನ್​​ಲೈನ್​​ ಬುಕ್ಕಿಂಗ್​ ಇಲ್ಲದ ಚಾರಣ ​ಪಾಯಿಂಟ್​​​​ಗಳಿಗೆ ನಿಷೇಧಿಸಲಾಗಿದೆ. ಆನ್​​ಲೈನ್​​​​ ಬುಕ್ಕಿಂಗ್​ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ. ಅರಣ್ಯ ವ್ಯಾಪ್ತಿಯ ಗಿರಿ ಶಿಬಿರಗಳಲ್ಲಿ ಚಾರಣ ಮಾಡುವರ ಹವ್ಯಾಸ ಏರಿಕೆಯಾಗಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ಅಲ್ಲದೆ, ಚಾರಣ ಹೋದವರು ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್​​, ಬಾಟಲಿ ಎಸೆಯುತ್ತಿದ್ದಾರೆ. ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಚಾರಣಕ್ಕೆ​ ನಿರ್ಬಂಧ ವಿಧಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

“ಗಣರಾಜ್ಯೋತ್ಸವದ ದಿನ ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಜೊತೆಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಬರುವವರನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಜೊತೆಗೆ ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಪರಿಸರಕ್ಕೂ ಹಾಣಿಯಾಗುತ್ತಿದೆ. ಹೀಗಾಗಿ ಹೊಸ ಮಾರ್ಗಸೂಚಿ ಜಾರಿಯಾಗುವ ತನಕ ಬುಕ್ಕಿಂಗ್ ಇಲ್ಲದ ಚಾರಣವನ್ನು ಸರ್ಕಾರ ನಿಷೇಧಿಸಿದೆ” ಎಂದು ಸಚಿವರು ಟಿಪ್ಪಣಿಯಲ್ಲಿ ವಿವರಿಸಿದ್ದಾರೆ.

“ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ (SOP) ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಸೂಚಿಸಿದೆ” ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X