ಮೈಸೂರಿನಲ್ಲಿ ಭೀಕರ ಅಗ್ನಿ ದುರಂತ; ಇಬ್ಬರ ಸಜೀವ ದಹನ, 7 ಮಂದಿಗೆ ಗಾಯ

Date:

ಮೈಸೂರಿನ ದಟ್ಟಗಳ್ಳಿಯ ರಿಂಗ್ ರಸ್ತೆ ಬಳಿ ಇರುವ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆ.

- Advertisement -

ಆರ್.ಟಿ.ನಗರದ ದಟ್ಟಗಳ್ಳಿ ನೇತಾಜಿ ವೃತ್ತದ ಸಮೀಪವಿರುವ ‘ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸಾಹಿಲ್ ಮತ್ತು ಪ್ರಕಾಶ್ ಎಂದು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಂಡಾಗ ಇವರಿಬ್ಬರೂ ಅಡುಗೆ ಕೋಣೆಯಲ್ಲಿದ್ದರು ಎನ್ನಲಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹೊರಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಘಟನೆ ನಡೆದಾಗ ಹೋಟೆಲ್‌ನಲ್ಲಿ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿ 25ಕ್ಕೂ ಹೆಚ್ಚು ಮಂದಿ ಇದ್ದರು. ಕ್ಷಣಾರ್ಧದಲ್ಲಿ ಬೆಂಕಿ ಆವರಿಸಿದ್ದರಿಂದ ದಟ್ಟ ಹೊಗೆ ತುಂಬಿಕೊಂಡಿತ್ತು. ಈ ವೇಳೆ ಆತಂಕಗೊಂಡ ಕೆಲವರು ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ಕಟ್ಟಡದ ಮೇಲಂತಸ್ತಿನಿಂದ ಕೆಳಗೆ ಜಿಗಿದಿದ್ದಾರೆ.

ಇದನ್ನು ಓದಿದ್ದೀರಾ? ಮೈಸೂರು | ಜೂ.13ರಂದು ಡೋರ್ನಹಳ್ಳಿಯಲ್ಲಿ ವಿಶ್ವವಿಖ್ಯಾತ ಸಂತ ಅಂತೋಣಿ ಮಹೋತ್ಸವ

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. 15ಕ್ಕೂ ಹೆಚ್ಚು ಜನರನ್ನು ಕಟ್ಟಡದಿಂದ ಸುರಕ್ಷಿತವಾಗಿ ರಕ್ಷಿಸುವಲ್ಲಿ ಅಗ್ನಿಶಾಮಕ ಪಡೆ ಯಶಸ್ವಿಯಾಗಿದೆ.

ಬೆಂಕಿಯ ಜ್ವಾಲೆಯಿಂದ ತೀವ್ರವಾಗಿ ಗಾಯಗೊಂಡಿರುವ 7 ಜನರನ್ನು ತಕ್ಷಣವೇ ನಗರದ ಸುಯೋಗ್ ಮತ್ತು ಅಪೋಲೋ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಬೆಂಕಿಯ ತೀವ್ರತೆಗೆ ಇಡೀ ಪಬ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಲೈಂಗಿಕ ಹಗರಣದ ಆರೋಪಿಗಳಿಗೆ ಸ್ಥಾನಮಾನ; ನಗೆಪಾಟಲಿಗೀಡಾದ ಮೋದಿಯ ʼಬೇಟಿ ಬಚಾವೋʼ ಘೋಷಣೆ

ಅಮೆರಿಕದ ಕುಖ್ಯಾತ ಲೈಂಗಿಕ ಹಗರಣದ ಅಪರಾಧಿ ಎಪ್ಸ್ಟೀನ್‌ ಜೊತೆಗೆ ಸಂಪರ್ಕದಲ್ಲಿದ್ದ ಕೇಂದ್ರ...

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

“ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ...

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...