ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅಪರಾಧ ಸಂಖ್ಯೆ 20ರಲ್ಲಿ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.
ಕೆ ಆರ್ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸಹ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದರು. ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು. ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ತಂಡ ರಚಿಸಿತ್ತು.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದ. ಆದರೆ, ಎಸ್ಐಟಿ ಅಧಿಕಾರಿಗಳ ತಾಂತ್ರಿಕ ನಡೆಯಿಂದ ಪ್ರಜ್ವಲ್ ರೇವಣ್ಣನ ಬಂಧಿನ ಯಶ್ವಿಸಿಯಾಯಿತು. ಪ್ರಕರಣದ ತನಿಖೆ ನಡೆಸಿದ ಎಸ್ಐಟಿ 1,632 ಪುಟಗಳ ಆರೋಪಪಟ್ಟಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಮನೆ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಉಲ್ಲೇಖವಾಗಿದೆ.