ಪ್ರಜ್ವಲ್‌ ರೇವಣ್ಣ ವಿರುದ್ಧದ ಪ್ರಕರಣ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Date:

ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

- Advertisement -

ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ​ ನ್ಯಾಯಾಧೀಶರಾದ​ ಸಂತೋಷ್ ಗಜಾನನ ಭಟ್ ಅವರು ಅಪರಾಧ ಸಂಖ್ಯೆ 20ರಲ್ಲಿ ಪ್ರಜ್ವಲ್​ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್​ ರೇವಣ್ಣಗೆ ಹಿನ್ನಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕೆ ಆರ್‌ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸಹ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದರು. ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್‌ ರೇವಣ್ಣ ಕಣ್ಣೀರು ಹಾಕಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್​ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್​ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್​ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು. ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ತಂಡ ರಚಿಸಿತ್ತು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದ. ಆದರೆ, ಎಸ್​ಐಟಿ ಅಧಿಕಾರಿಗಳ ತಾಂತ್ರಿಕ ನಡೆಯಿಂದ ಪ್ರಜ್ವಲ್​ ರೇವಣ್ಣನ ಬಂಧಿನ ಯಶ್ವಿಸಿಯಾಯಿತು. ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ 1,632 ಪುಟಗಳ ಆರೋಪಪಟ್ಟಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ​ ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಮನೆ ಕೆಲಸದಾಕೆಗೆ ಲೈಂಗಿಕ​ ದೌರ್ಜನ್ಯ ನೀಡಿರುವುದು ಉಲ್ಲೇಖವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...