ಜನರ ಶಿಕ್ಷಣದ ಹಕ್ಕು ಕಿತ್ತುಕೊಂಡು, ಗ್ಯಾರಂಟಿ ಮೂಲಕ ಬಾಯಿ ಮುಚ್ಚಿಸಲು ಸರ್ಕಾರ ಯತ್ನಿಸುತ್ತಿದೆ : ಕೆ ಮರುಳಸಿದ್ದಪ್ಪ

Date:

“ನಮ್ಮನ್ನು ಆಳುತ್ತಿರುವ ಎಲ್ಲಾ ಸರ್ಕಾರಗಳು ಶ್ರೀಮಂತ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡುತ್ತಾ, ಬಡವರನ್ನು ಕಡೆಗಣಿಸುತ್ತಲೇ ಬಂದಿವೆ. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗದ ಹಕ್ಕನ್ನು ಕಿತ್ತುಕೊಂಡು, ಗ್ಯಾರಂಟಿ ಕೊಟ್ಟು ಜನರ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತಿದೆ. ಸರ್ಕಾರಿ ಶಾಲೆಗಳ ಮಹತ್ವ ಅರಿಯದ ಸರ್ಕಾರದ ವಿರುದ್ಧ ನಮ್ಮೂರ ಶಾಲೆ ಉಳಿಸಲು ಒಂದಾಗಿ ಹೋರಾಡೋಣ” ಎಂದು ಕರೆ ಹಿರಿಯ ಸಾಹಿತಿ ಕೆ. ಮರುಳಸಿದ್ದಪ್ಪ ಅವರು ಕರೆನೀಡಿದರು.

- Advertisement -

‘ನಮ್ಮೂರ ಶಾಲೆ ಉಳಿಸಿ’ ‘ನಮ್ಮೂರ ಶಾಲೆ ನಮ್ಮ ಅಸ್ತಿತ್ವ’, ಎಂಬ ಘೋಷಣೆಯೊಂದಿಗೆ ಇಂದು ನಗರದ ಫ್ರೀಡಂ ಪಾರ್ಕಿನಲ್ಲಿ ರಾಜ್ಯ ಮಟ್ಟದ ಬೃಹತ್ ಜನ ಸಮಾವೇಶದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಮಾವೇಶದಲ್ಲಿ ಶಿಕ್ಷಣ ತಜ್ಞರಾದ ಡಾ ನಿರಂಜನಾರಾಧ್ಯ ಮಾತನಾಡಿ, “ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ NEP – 2020 ನ್ನು ನಾವು ಸಂಪೂರ್ಣವಾಗಿ ಧಿಕ್ಕರಿಸಿ, SEP ತರುವ ಮೂಲಕ ಶಿಕ್ಷಣವನ್ನು ಬಲಪಡಿಸುತ್ತೇವೆ ಎಂದಿದೆ. ಆದರೆ ಅವರೇ ಅಪ್ರಜಾತಾಂತ್ರಿಕವಾಗಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಜಾರಿಗೆ ತಂದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸ್ಕೃತಿ ಚಿಂತಕರಾದ ಪ್ರೊ ಎಸ್. ಜಿ ಸಿದ್ದರಾಮಯ್ಯ ಅವರು ಮಾತನಾಡಿ, “ಹಳ್ಳಿಗಾಡಿನ ಮಕ್ಕಳು ತಮ್ಮ ಊರಿನ ಸರ್ಕಾರಿ ಶಾಲೆ ಉಳಿಸಿಕೊಳ್ಳಲು ಹೋರಾಟಕ್ಕೆ ಬಂದಿದ್ದಾರೆ. ಮಕ್ಕಳನ್ನು ಈ ಸ್ಥಿತಿಗೆ ತಳ್ಳಿರುವುದು ಸರ್ಕಾರಕ್ಕೆ ಗೌರವ ತರುವ ವಿಷಯವಲ್ಲ. ಒಬ್ಬೊಬ್ಬ ಮಂತ್ರಿಯು ಖಾಸಗಿ ಶಾಲೆಗಳನ್ನು ತೆರೆಯುವ ಮೂಲಕ ಶಿಕ್ಷಣವನ್ನು ದರೋಡೆ ಮಾಡುತ್ತಿದ್ದಾರೆ. ಕೆಪಿಎಸ್ ಯೋಜನೆ ಮೂಲಕ ಬಡ ಮಕ್ಕಳ ಶಿಕ್ಷಣದ ಕನಸನ್ನು ಕಿತ್ತುಕೊಳ್ಳುವ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿದೆ” ಎಂದು ಆರೋಪಿಸಿದರು.

“ಸರ್ಕಾರದ ನಡೆಯನ್ನು ವಿರೋಧಿಸಿ ಹಳ್ಳಿಗಾಡಿನ ಮಕ್ಕಳು ಹೋರಾಟಕ್ಕೆ ಬಂದಿದ್ದು, ಅದನ್ನು ನೋಡಿದರೆ ಕಣ್ಣಲ್ಲಿ ರಕ್ತ ಬರುತ್ತದೆ.  ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಿದರೂ ಹಳ್ಳಿಗಾಡಿನ ಮಕ್ಕಳು, ಅದರಲ್ಲೂ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಈ ಕನಿಷ್ಠ ಜ್ಞಾನದ ಅರಿವಿಲ್ಲದ ರಾಜ್ಯ ಸರ್ಕಾರದ ಶಾಲೆ ಮುಚ್ಚುವ ಕ್ರಮ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು” ಎಂದರು.

ಕೆಪಿಎಸ್‌ ೧

“ನಮ್ಮನ್ನಾಳುತ್ತಿರುವ ಸರ್ಕಾರಗಳು ಬಡವರ ಪರವಾಗಿ ನೀತಿಗಳನ್ನು ತರುತ್ತಾರೆಂದು ನಂಬಲಾಗುವುದಿಲ್ಲ. ನಮ್ಮ ಹಕ್ಕಿಗಾಗಿ ಬೀದಿಗಿಳಿದು ಮಾಡುವ ಹೋರಾಟಗಳೇ ಏಕೈಕ ದಾರಿ” ಎಂದು ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ಹೇಳಿದರು.

ಸಮಾವೇಶದಲ್ಲಿ ವಿಶ್ರಾಂತ ಕುಲಪತಿ ಪ್ರೊ ಎ ಮುರಿಗೆಪ್ಪ, ಹಿರಿಯ ಸಾಹಿತಿ ಡಾ ಅಲ್ಲಮಪ್ರಭು ಬೆಟ್ಟದೂರು, ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್‌ ಕೆರೆಗೋಡು, ವಿಶ್ರಾಂತ ಕುಲಪತಿ ಪ್ರೊ ಸಬಿಹಾ ಭೂಮಿಗೌಡ, ಹೋರಾಟಗಾರ ಉಗ್ರನರಸಿಂಹೇಗೌಡ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ ವಿ.ಎನ್ ರಾಜಶೇಖರ್, ಎಐಯುಟಿಯುಸಿ ಸೋಮಶೇಖರ ಕೆ, ಎಐಕೆಕೆಎಂಎಸ್ ಶಶಿಧರ್ ಎಂ, ಎಐಎಂಎಸ್‌ಎಸ್ ರಾಜ್ಯ ಕಾರ್ಯದರ್ಶಿ ಶೋಭಾ ಎಸ್, ಎಐಡಿವೈಓ ಸಿದ್ದಲಿಂಗ ಬಾಗೇವಾಡಿಯವರು, ಎಐಡಿಎಸ್ಓ ರಾಜ್ಯ ನಾಯಕರು ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಭಾಗವಹಿಸಿದ್ದರು.

ಕೆಪಿಎಸ್‌ ೨

ಸಮಾವೇಶದಲ್ಲಿ ನಮ್ಮೂರ ಶಾಲೆ ಉಳಿಸಲು ಮುಂದಿನ ಹೋರಾಟವನ್ನು ತೀವ್ರಗೊಳಿಸಲು, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಎ. ಮುರಿಗೆಪ್ಪ ಅವರ ಅಧ್ಯಕ್ಷತೆಯಲ್ಲಿ ನಾಡಿನ ಹೆಸರಾಂತ ಶಿಕ್ಷಣ ತಜ್ಞರು, ಸಾಹಿತಿಗಳು, ಸಾಮಾಜಿಕ ಹೋರಾಟಗಾರರು, ರಾಜ್ಯದ ಎಲ್ಲಾ ಜಿಲ್ಲೆಗಳ ಗ್ರಾಮದ ಪೋಷಕರು, ಗ್ರಾಮಸ್ಥರು ಸೇರಿದಂತೆ ರಾಜ್ಯ ಮಟ್ಟದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯನ್ನು ರಚಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...