ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

Date:

ಕರ್ನಾಟಕದಲ್ಲಿ ಹುಕ್ಕಾಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಹುಕ್ಕಾ ಬಾರ್‌ಗಳನ್ನು ನಿಷೇಧಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಪದ್ಮ ಅಧಿಸೂಚನೆ ಹೊರಡಿಸಿದ್ದಾರೆ.

ಸಂವಿಧಾನದ 47ನೇ ವಿಧಿ ಅನ್ವಯ ರಾಜ್ಯ ಸರ್ಕಾರಕ್ಕೆ ಲಭ್ಯವಿರುವ ಅಧಿಕಾರ ಬಳಸಿ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಸಂಗ್ರಹಣೆ, ಜಾಹೀರಾತು, ಸೇವನೆಗೆ ಪ್ರಚೋದನೆ ಹಾಗೂ ವ್ಯಾಪಾರವನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ.

ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ

ಈ ಆದೇಶ ಉಲ್ಲಂಘನೆ ಮಾಡಿದವರ ವಿರುದ್ಧ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಕೋಟ್ಪಾ) ಕಾಯ್ದೆ–2003, ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆ–2015, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006, ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ನಿಯಮ–2015 ಮತ್ತು ಭಾರತೀಯ ದಂಡಸಂಹಿತೆ ಹಾಗೂ ಅಗ್ನಿ ನಿಯಂತ್ರಣ ಮತ್ತು ಸುರಕ್ಷತಾ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧೀನ ಕಾರ್ಯದರ್ಶಿ ವಿ. ಪದ್ಮ ಆದೇಶದಲ್ಲಿ ಸೂಚಿಸಿದ್ದಾರೆ.

ಕೋಟ್ಪಾ ಕಾಯ್ದೆಯಡಿ ಹುಕ್ಕಾವನ್ನು ತಂಬಾಕು ಎಂದು ಪರಿಗಣಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಯಿಂದ ನೂರು ಮೀಟರ್ ವ್ಯಾಪ್ತಿಯಲ್ಲಿ ಹುಕ್ಕಾ ಒಳಗೊಂಡಂತೆ ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಕರ್ನಾಟಕ ವಿಷ (ಸ್ವಾಧೀನ ಮತ್ತು ಮಾರಾಟ) ಕಾಯ್ದೆ–2015ರ ಅಡಿಯಲ್ಲಿ ನಿಕೋಟಿನ್ ಅನ್ನು ವಿಷ ಅಥವಾ ಅಪಾಯಕಾರಿ ರಾಸಾಯನಿಕ ಎಂದು ಪರಿಗಣಿಸಲಾಗಿದೆ ಎಂಬ ವಿವರಣೆ ಆದೇಶದಲ್ಲಿದೆ.

ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಟ್‌ ಟೊಬ್ಯಾಕೊ ಸರ್ವೇ 2016-17 ಅಧ್ಯಯನದ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು (15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ.

ಈ ಪೈಕಿ ಶೇ.8.8 ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ವರೋಕ್ತ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ. ಭಾರತದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ, ಜಾಹೀರಾತು, ಸಂಗ್ರಹಣೆ, ವಾಣಿಜ್ಯ ಮಹಾರ, ಉತ್ಪಾದನೆ, ಹಂಚಿಕೆ ಇವುಗಳನ್ನು ಸಿಗರೇಟ್ ಅಂಡ್ ಟೊಬ್ಯಾಕೋ ಪ್ರಾಡಕ್ಟ್ ಆಕ್ಟ್ (COTPA) 2003 ರಲ್ಲಿ ನಿಯಂತ್ರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹುಕ್ಕಾ ವ್ಯಸನಕಾರಿ ಉತ್ಪನ್ನ: ವಿಶ್ವ ಆರೋಗ್ಯ ಸಂಸ್ಥೆ

ವಿಶ್ವ ಆರೋಗ್ಯ ಸಂಸ್ಥೆಯು ಹುಕ್ಕಾವನ್ನು ವ್ಯಸನಕಾರಿ ಉತ್ಪನ್ನ ಎಂದು ಘೋಷಿಸಿದೆ. ಹುಕ್ಕಾ ಸೇವನೆಯು ಆರೋಗ್ಯಕ್ಕೆ ಅತ್ಯಂತ ಮಾರಕ, ಹುಕ್ಕಾ ಬಾರ್‌ಗಳು ಅಗ್ನಿ ಅನಾಹುತಗಳಿಗೆ ಕಾರಣವಾಗುತ್ತಿದೆ. ಅಧ್ಯಯನಗಳ ಪ್ರಕಾರ 45 ನಿಮಿಷಗಳ ಹುಕ್ಕಾ ಸೇವನೆ 100 ಸಿಗರೇಟ್ ಸೇವನೆಗೆ ಸಮನಾಗಿದ್ದು, ಆರೋಗ್ಯಕ್ಕೆ ಮಾರಕವಾಗಿದೆ. ಮುಚ್ಚಿರುವ ಕೊಠಡಿಯಲ್ಲಿ ಹುಕ್ಕಾವನ್ನು ನಳಿಕೆ ಅಥವಾ ಪೈಪ್ ಸಲಕರಣೆ ಮೂಲಕ ಬಾಯಿಯಿಂದ ಸೇವನೆ ಮಾಡುವ ಉತ್ಪನ್ನವಾಗಿದೆ. ಇದರಿಂದ ಸಾಂಕ್ರಾಮಿಕ ಕಾಯಿಲೆಗಳಾದ ಹರ್ಪಿಸ್, ಕ್ಷಯರೋಗ, ಹೆಪಟೈಟಿಸ್, ಕೋವಿಡ್ ಹಾಗೂ ಇತರೆ ಕಾಯಿಲೆಗಳು ಹರಡುವ ಆತಂಕವಿದೆ. ಈ ಎಲ್ಲ ಕಾರಣದಿಂದ ಹುಕ್ಕಾ ನಿಷೇಧಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಫೆಬ್ರುವರಿ 14ರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ: ಎಲ್ಲೆಲ್ಲಿ?

ಹುಕ್ಕಾದಲ್ಲಿರುವ ನಿಕೋಟಿನ್ ಅಥವಾ ತಂಬಾಕು ಹಾಗೂ ಮೊಲಾಸಸ್ ಅಥವಾ ಸುವಾಸನಭರಿತ ಪದಾರ್ಥಗಳಲ್ಲಿ ಹಚ್ಚಿನ ಪುಮಾಣದಲ್ಲಿ ಕಾರ್ಬನ್ ಮಾನಾಕ್ಸೈಡ್ ರಾಸಾಯನಿಕ ವಸ್ತುವನ್ನು ಒಳಗೊಂಡಿದ್ದು, ಆರೋಗ್ಯಕ್ಕೆ ಅತ್ಯಂತ ಮಾರಕವಾಗಿದೆ.

ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...