ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್

Date:

5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಮಾರ್ಚ್‌ 6ರಂದು ಆದೇಶ ಹೊರಡಿಸಿದೆ.

- Advertisement -

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9ನೇ ತರಗತಿಗಳ ಮಕ್ಕಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ರಾಜ್ಯ ಸರ್ಕಾರ ಎರಡು ಸುತ್ತೋಲೆಗಳನ್ನು ಹೊರಡಿಸಿತ್ತು. ಈ ಸುತ್ತೋಲೆಯಲ್ಲಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿದ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಪ್ರಶ್ನಿಸಿ, ಡಿಸೆಂಬರ್ 2023ರಲ್ಲಿ ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ (ರುಪ್ಸಾ) ಒಕ್ಕೂಟ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಸಂದರ್ಶನ | ಸಡಿಲಗೊಂಡ ಪಿಎಫ್ ನಿಯಮ: ಕಾರ್ಮಿಕರ ಕೈಹಿಡಿಯುವುದೇ...

ತುರ್ತು ಸಂದರ್ಭಗಳಲ್ಲಿ ಪಿಎಫ್ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಇಪಿಎಫ್‌ಒ ಸರಳಗೊಳಿಸಿರುವುದು ಕಾರ್ಮಿಕರಿಗೆ ತಕ್ಷಣದ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಈ ನಿಯಮ ಸಡಿಲಿಕೆಯಿಂದ ಕಾರ್ಮಿಕರ ನಿವೃತ್ತಿ ಬದುಕಿನ ಭದ್ರತಾ ನಿಧಿ ಕರಗುವ ಅಪಾಯವಿದೆ...

ಮಾರ್ಚ್‌ 6ರಂದು ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ತೀರ್ಪು ನೀಡಿದೆ. ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾಗಲಿದೆ. ಇನ್ನು ನ್ಯಾಯಾಲಯದ ಆದೇಶದ ಪ್ರತಿ ಲಭ್ಯವಾಗಬೇಕಿದ್ದು, ಈಗಾಗಲೇ ಆದೇಶ ಹೊರಬಿದ್ದಿದೆ.

”ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರದ ಸುತ್ತೋಲೆ ತಿಳಿಸುತ್ತದೆ. ಇದು ಕೇವಲ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸುವುದು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು” ಎಂದು ಒಕ್ಕೂಟ ಮನವಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ತುಘಲಕ್ ದರ್ಬಾರ್: ಬೆಂಗಳೂರಿನ ಯುಬಿ ಸಿಟಿ ಮಾಲ್‌ನಲ್ಲಿ ಪ್ರತಿ ಗಂಟೆಗೆ ₹1,000 ಪಾರ್ಕಿಂಗ್ ಶುಲ್ಕ

”ಸಾಮಾನ್ಯ ಪಠ್ಯದಿಂದಲೇ ಕಲಿಕಾ ಚೇತರಿಕೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ” ಎಂದು ಸರ್ಕಾರ ಪರ ವಕೀಲರು ವಾದಿಸಿದ್ದರು.

”ವಿದ್ಯಾರ್ಥಿಗಳಿಗೆ ನೀಡುವ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದ ಹೊರತಾಗಿ ಬೇರೆ ಪ್ರಶ್ನೆಗಳಿಲ್ಲ. ಇದರಿಂದ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಹಾಗಾಗಿ, ಬೋರ್ಡ್‌ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು” ಎಂದು ಹೇಳಿದ್ದರು.

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ...

ವಿಜ್ಞಾನ ಜಗತ್ತಿನ ಅಮೂಲ್ಯ ವಿಜ್ಞಾನಿ- ಪ್ರೊ. ಅಮೂಲ್ಯ ಕುಮಾರ್ ರೆಡ್ಡಿ

ಭಾರತೀಯ ವಿಜ್ಞಾನದ ಆಸಕ್ತರಿಗೆ ಪರಿಚಯ ಇರಲೇಬೇಕಾದ ಹಾಗೂ ವಿಜ್ಞಾನವನ್ನು ಪ್ರಯೋಗಾಲಯದಿಂದ ಆಚೆ...

ಎನ್‌ವಿಡಿಯಾ ಗೂಢಚರ್ಯೆ ಭೀತಿ: ಚೀನಾದ ಮೇಲಿನ ಚಿಪ್ ದಿಗ್ಬಂಧನ ವಿಫಲ, ಒಳಜಗಳಕ್ಕೆ ಇಳಿದ ಅಮೆರಿಕದ ಆಡಳಿತ ವರ್ಗ

ನವೆಂಬರ್ 18-19ರಂದು ಚೀನಾದ ಶೆನ್‌ಜೆನ್‌ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಟ್ರಂಪ್ ಚೀನಾ ಅಧ್ಯಕ್ಷ...