5, 8, 9 ಮತ್ತು 11ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದ ಹೈಕೋರ್ಟ್‌

Date:

Advertisements

5, 8, 9 ಮತ್ತು 11ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠವು 5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಮಾರ್ಚ್‌ 18ರಂದು ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ, ಶುಕ್ರವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಿದೆ.

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ. ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆಯನ್ನು ಮುಂದುವರಿಸಲು ಸೂಚನೆ ನೀಡಿದೆ. ಜತೆಗೆ, ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

Advertisements

ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.

ಈ ಮೂಲಕ 5, 8, 9ನೇ ತರಗತಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸೋಮವಾರದಿಂದ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಐದನೇ ತರಗತಿಯ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿದೆ. 8, 9 ತರಗತಿಗಳದ್ದು ಎರಡೆರಡು ವಿಷಯಗಳ ಪರೀಕ್ಷೆ ಆಗಿದೆ. 11ನೇ ತರಗತಿಯ ಎಲ್ಲ ವಿಷಯಗಳ ಪರೀಕ್ಷೆ ಮುಗಿದಿದ್ದು, ಫಲಿತಾಂಶವಷ್ಟೇ ಬಾಕಿ ಇದೆ. ಹಾಗಾಗಿ, 5, 8, 9 ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದ ನಡೆಸುವ ಕುರಿತು ಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೀರದ ನೀರಿನ ಸಮಸ್ಯೆ; ಅಪಾರ್ಟ್‌ಮೆಂಟ್‌ ಬಾಡಿಗೆ ಕಡಿತಗೊಳಿಸಲು ಬಾಡಿಗೆದಾರರ ಒತ್ತಾಯ

ಏನಿದು ಪ್ರಕರಣ?

2023ರ ಅ.6 ಮತ್ತು 9 ರಂದು ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನ ನೀಡಿತ್ತು.

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು.

ಅದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, “ಸರ್ಕಾರದ ಈ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ನಾನಾ ಸೆಕ್ಷನ್‌ಗಳ ಉಲ್ಲಂಘನೆಯಾಗಿದೆ. ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು” ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿತ್ತು.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಮಾರ್ಚ್‌ 13 ರಂದು ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಹೇಳಿತ್ತು. ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸಮಗ್ರ ವಿಚಾರಣೆ ನಡೆಸಿ ಆದಷ್ಟು ಶೀಘ್ರ ತೀರ್ಪು ನೀಡುವಂತೆ ಹೈಕೋರ್ಟ್‌ಗೆ ಸೂಚಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X