5, 8, 9 ಮತ್ತು 11ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ಅನುಮತಿ ನೀಡಿದ ಹೈಕೋರ್ಟ್‌

Date:

5, 8, 9 ಮತ್ತು 11ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.

- Advertisement -

ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠವು 5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಮಾರ್ಚ್‌ 18ರಂದು ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ, ಶುಕ್ರವಾರ ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ. ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆಯನ್ನು ಮುಂದುವರಿಸಲು ಸೂಚನೆ ನೀಡಿದೆ. ಜತೆಗೆ, ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.

ಈ ಮೂಲಕ 5, 8, 9ನೇ ತರಗತಿ ಮಕ್ಕಳಿಗೆ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸೋಮವಾರದಿಂದ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಐದನೇ ತರಗತಿಯ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿದೆ. 8, 9 ತರಗತಿಗಳದ್ದು ಎರಡೆರಡು ವಿಷಯಗಳ ಪರೀಕ್ಷೆ ಆಗಿದೆ. 11ನೇ ತರಗತಿಯ ಎಲ್ಲ ವಿಷಯಗಳ ಪರೀಕ್ಷೆ ಮುಗಿದಿದ್ದು, ಫಲಿತಾಂಶವಷ್ಟೇ ಬಾಕಿ ಇದೆ. ಹಾಗಾಗಿ, 5, 8, 9 ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸೋಮವಾರದಿಂದ ನಡೆಸುವ ಕುರಿತು ಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೀರದ ನೀರಿನ ಸಮಸ್ಯೆ; ಅಪಾರ್ಟ್‌ಮೆಂಟ್‌ ಬಾಡಿಗೆ ಕಡಿತಗೊಳಿಸಲು ಬಾಡಿಗೆದಾರರ ಒತ್ತಾಯ

ಏನಿದು ಪ್ರಕರಣ?

2023ರ ಅ.6 ಮತ್ತು 9 ರಂದು ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನ ನೀಡಿತ್ತು.

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು.

ಅದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, “ಸರ್ಕಾರದ ಈ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು ಕರ್ನಾಟಕ ಶಿಕ್ಷಣ ಕಾಯಿದೆಯ ನಾನಾ ಸೆಕ್ಷನ್‌ಗಳ ಉಲ್ಲಂಘನೆಯಾಗಿದೆ. ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು” ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿತ್ತು.

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಮಾರ್ಚ್‌ 13 ರಂದು ಸುಪ್ರೀಂ ಕೋರ್ಟ್‌ ವಿಭಾಗೀಯ ಪೀಠ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಹೇಳಿತ್ತು. ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸಮಗ್ರ ವಿಚಾರಣೆ ನಡೆಸಿ ಆದಷ್ಟು ಶೀಘ್ರ ತೀರ್ಪು ನೀಡುವಂತೆ ಹೈಕೋರ್ಟ್‌ಗೆ ಸೂಚಿಸಿತ್ತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

ದಕ್ಷಿಣ ಕನ್ನಡ | 180 ಗಂಟೆಗಳ ಮೈಲಿಗಲ್ಲನ್ನು ತಲುಪಿದ ಕೊಂಕಣಿ ಗಾಯನ ಮ್ಯಾರಾಥಾನ್

ಮಂಗಳೂರು: ಮಾಂಡ್ ಸೊಭಾನ್ ಆಯೋಜಿಸಿರುವ ಐತಿಹಾಸಿಕ 12 ದಿನ, 12 ಗಂಟೆ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ: ಪ್ರತಿನಿಧಿಳ ನೋಂದಣಿಗೆ ಆಹ್ವಾನ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್‌ 18ರಂದು ಬೆಳಿಗ್ಗೆ 9.00ರಿಂದ...