ಟ್ಯಾಂಕರ್‌ಗಳ ಮೇಲೆ ಸ್ಟಿಕರ್ ಅಂಟಿಸದ ಅಧಿಕಾರಿಗಳ ಮೇಲೆ ಗರಂ ಆದ ಜಲಮಂಡಳಿ ಅಧ್ಯಕ್ಷ

Date:

  • ಹೆಚ್ಚಿನ ಪ್ರಮಾಣದ ಟ್ಯಾಂಕ್‌ಗಳನ್ನು ಅಳವಡಿಸಲು ಸೂಚನೆ
  • ಜನಸಾಂದ್ರತೆ ಆಧಾರದ ಮೇಲೆ ನೀರು ಸರಬರಾಜು ಮಾಡಿ

ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇರುವಂತಹ ಬಂಡೆಪಾಳ್ಯ ಗ್ರಾಮಕ್ಕೆ ಮಾರ್ಚ್‌ 16ರಂದು ಭೇಟಿ ನೀಡಿ, ಉಚಿತವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗ್ರಾಮಸ್ಥರೊಂದಿಗೆ ಮಾತನಾಡಿದ ಅಧ್ಯಕ್ಷರು ನೀರಿನ ಸರಬರಾಜು ನೀರಿನ ಲಭ್ಯತೆ ನೀರಿನ ಗುಣಮಟ್ಟ ಎಲ್ಲದರ ಬಗ್ಗೆ ಮಹಿಳೆಯರಿಂದ ಮಾಹಿತಿ ಪಡೆದುಕೊಂಡರು.

ಟ್ಯಾಂಕರ್‌ಗಳ ಮೇಲೆ ಸ್ಟಿಕರ್ ಅಂಟಿಸದ ಅಧಿಕಾರಿಗಳ ಮೇಲೆ ಗರಂ

ಬಂಡಿಪಾಳ್ಯದಲ್ಲಿ ನೀರಿನ ವಿತರಣೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಂತಹ ಸಂದರ್ಭದಲ್ಲಿ ಉಚಿತ ಟ್ಯಾಂಕರ್ ಮೇಲೆ ಸ್ಟಿಕ್ಕರ್ ಅಂಟಿಸದೆ ಇರುವಂತಹ ಅಧಿಕಾರಿಗಳ ಮೇಲೆ ಜಲಮಂಡಳಿಯ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಅವರು ಗರಂ ಆದರು.

ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುತ್ತಿರುವಂತಹ ಟ್ಯಾಂಕರ್‌ಗಳ ಮೇಲೆ ಉಚಿತ ಸ್ಟಿಕ್ಕರ್ ಅನ್ನು ಅಂಟಿಸುವುದು ಕಡ್ಡಾಯ. ಈ ಬಗ್ಗೆ ಅಧಿಕಾರಿಗಳಿಗೆ ಹಲವಾರು ಬಾರಿ ಸೂಚನೆ ನೀಡಲಾಗಿದೆ. ಆ ನೀರಿನ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಉಚಿತ ನೀರಿನ ಟ್ಯಾಂಕರ್‌ಗಳ ಮೇಲೆ ಸ್ಟಿಕರ್‌ಗಳನ್ನ ಅಳವಡಿಸಿರುವುದನ್ನ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಫ್ರೀಡಂ ಪಾರ್ಕ್ ಪಾರ್ಕಿಂಗ್ ಸೌಲಭ್ಯ ನಿರ್ವಹಣೆ ಗುತ್ತಿಗೆ ಪಡೆದ ಕೆಂಗೇರಿ ಸಂಸ್ಥೆ

ಹೆಚ್ಚಿನ ಪ್ರಮಾಣದ ಟ್ಯಾಂಕ್‌ಗಳನ್ನು ಅಳವಡಿಸಲು ಸೂಚನೆ

ನೀರಿನ ಲಭ್ಯತೆ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಟ್ಯಾಂಕ್‌ಗಳನ್ನ ಅಳವಡಿಸುವುದು ಸೂಕ್ತ. ಬಂಡಿಪಾಳ್ಯದ ಗ್ರಾಮಸ್ಥರೊಂದಿಗೆ ಮಾತನಾಡಿದ ಜಲ ಮಂಡಳಿ ಅಧ್ಯಕ್ಷರು ನೀರಿನ ಪ್ರಮಾಣ ಹಾಗೂ ಲಭ್ಯತೆ ಬಗ್ಗೆ ಮಾಹಿತಿ ಪಡೆದರು.

ಕೆಲವು ಮಹಿಳೆಯರು ಇನ್ನಷ್ಟು ನೀರಿನ ವಿತರಣೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರು ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕ್‌ಗಳನ್ನು ಅಳವಡಿಸುವಂತೆ ಹಾಗೂ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಅವುಗಳನ್ನ ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...