ವಿಶೇಷ ಅಧಿವೇಶನ: ಜನಮತಕ್ಕೆ ಬೆಲೆ ಇಲ್ಲವೇ, ರಾಜ್ಯಪಾಲರು ಕೇಂದ್ರದ ‘ಕೈಗೊಂಬೆ’ಯಾದರೇ?

Date:

ರಾಜ್ಯದ ಹಿತಾಸಕ್ತಿ ಕಾಪಾಡಬೇಕಾದ ಸಾಂವಿಧಾನಿಕ ಮುಖ್ಯಸ್ಥರಾದ ರಾಜ್ಯಪಾಲರು, ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿ ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆಯೇ? ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ (MGNREGA) ರದ್ದುಪಡಿಸಿರುವ ಕೇಂದ್ರದ ನಡೆಯನ್ನು ಪ್ರಶ್ನಿಸುವ ಸಾಲುಗಳನ್ನು ಓದಲು ನಿರಾಕರಿಸುವ ಮೂಲಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಹಕ್ಕನ್ನು ದಮನ ಮಾಡಲು ಹೊರಟಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -

​ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಇಂದು ಭಾಷಣ ಮಾಡಬೇಕಿದ್ದ ರಾಜ್ಯಪಾಲರು, ರಾಜ್ಯ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣದ ಪ್ರತಿಯಲ್ಲಿರುವ ಕೇಂದ್ರ ಸರ್ಕಾರವನ್ನು ಟೀಕಿಸುವ 11 ಪ್ಯಾರಾಗಳನ್ನು (ಖಂಡಿಕೆ) ಕೈಬಿಡುವಂತೆ ಪಟ್ಟು ಹಿಡಿದಿದ್ದಾರೆ. ಇದು ಚುನಾಯಿತ ಸರ್ಕಾರದ ದನಿಯನ್ನು ಅಡಗಿಸುವ ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

​ರಾಜ್ಯದ ಧ್ವನಿ ಅಡಗಿಸುವ ಯತ್ನವೇ?
ಕೇಂದ್ರ ಸರ್ಕಾರವು ಮನರೇಗ (MGNREGA) ಬದಲಿಗೆ ಜಾರಿಗೆ ತಂದಿರುವ ‘ವಿಬಿ-ಜಿ ರಾಮ್ (ಜಿ)’ ಕಾಯ್ದೆಯಿಂದ (VB-G RAM (G) Act) ರಾಜ್ಯದ ಗ್ರಾಮೀಣ ಭಾಗದ ಜನರ ಉದ್ಯೋಗ ಹಕ್ಕಿಗೆ ಧಕ್ಕೆಯಾಗಿದೆ ಮತ್ತು 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬ ಸತ್ಯಾಂಶಗಳನ್ನು ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. “ಪಂಚಾಯಿತಿಗಳ ಅಧಿಕಾರ ಕಸಿದುಕೊಂಡು ದೆಹಲಿಯಲ್ಲಿ ಕುಳಿತು ನಿಯಂತ್ರಿಸುವುದು ಎಷ್ಟು ಸರಿ? ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ರಾಜ್ಯಪಾಲರ ಮೂಲಕ ಹೇಳಿಸಬಾರದೇ?” ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ರಾಜ್ಯಪಾಲರ ನಡೆಯನ್ನು ಕಟುವಾಗಿ ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಕೇಂದ್ರದ ಕೈಗೊಂಬೆಯಲ್ಲ- ಆಯಾ ರಾಜ್ಯದ ಜನಾದೇಶ ಧಿಕ್ಕರಿಸುವ ನಡೆ ಸಂವಿಧಾನಬಾಹಿರ

​ಸಂವಿಧಾನದ ವಿಧಿ 176(1) ಮತ್ತು 163ರ ಅನ್ವಯ, ಸಚಿವ ಸಂಪುಟ ಅನುಮೋದಿಸಿದ ಭಾಷಣವನ್ನೇ ರಾಜ್ಯಪಾಲರು ಯಥಾವತ್ತಾಗಿ ಓದಬೇಕು. ಆದರೆ, ತಮಿಳುನಾಡು ಮತ್ತು ಕೇರಳದ ರಾಜ್ಯಪಾಲರ ಹಾದಿಯನ್ನೇ ತುಳಿದಿರುವ ಗೆಹ್ಲೋಟ್ ಅವರು, ಸಾಂವಿಧಾನಿಕ ಬಾಧ್ಯತೆಗಿಂತ ತಮ್ಮ ಪಕ್ಷದ ನಿಷ್ಠೆಯೇ ಮುಖ್ಯ ಎಂಬಂತೆ ವರ್ತಿಸುತ್ತಿದ್ದಾರೆ.

​ಕಾನೂನು ಹೋರಾಟಕ್ಕೆ ಸರ್ಕಾರ ಸಜ್ಜು
ರಾಜ್ಯಪಾಲರ ಈ ಹಠಮಾರಿ ಧೋರಣೆಯನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಈಗಾಗಲೇ ದೆಹಲಿಗೆ ತೆರಳಿದ್ದು, ರಾಜ್ಯಪಾಲರು ಅಧಿವೇಶನಕ್ಕೆ ಗೈರಾದರೆ ಅಥವಾ ಭಾಷಣ ಓದಲು ನಿರಾಕರಿಸಿದರೆ ಕೈಗೊಳ್ಳಬೇಕಾದ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ರಾಜ್ಯಪಾಲರ ಈ ನಡೆ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಸ್ವಾಯತ್ತತೆಗೆ ಮತ್ತು ಜನಾದೇಶಕ್ಕೆ ಮಾಡುತ್ತಿರುವ ಅವಮಾನವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...