‘ನೆಮ್ಮದಿಯಾಗಿ ಕರ್ತವ್ಯ ನಿರ್ವಹಣೆ ಸಾಧ್ಯವಾಗುತ್ತಿಲ್ಲ’; ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ

Date:

ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಂಪತಿ ಕೆಲಸದ ನಿಮಿತ್ತ ಬೇರೆ ಬೇರೆ ಜಿಲ್ಲೆಯಲ್ಲಿ ವಾಸಿಸುತ್ತಿದ್ದೇವೆ. ಪೋಷಕರನ್ನು ಕೂಡ ನೋಡಿಕೊಳ್ಳಲಾಗುತ್ತಿಲ್ಲ. ಪತಿ-ಪತ್ನಿ ಜೊತೆಯಾಗಿರಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಪೊಲೀಸ್‌ ದಂಪತಿಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ.

- Advertisement -

ಸಾಮಾನ್ಯವಾಗಿ, ಬಹುತೇಕ ಇಲಾಖೆಗಳಲ್ಲಿ ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆ‌ರ್ ನಿಯಮದ ಪ್ರಕಾರ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಪತಿ-ಪತ್ನಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕೆಂಬ ನಿಯಮವಿದೆ. ಆದರೂ, ದಂಪತಿಗಳನ್ನು ಬೇರೆ-ಬೇರೆ ಜಿಲ್ಲೆಗೆ ನಿಯೋಜಿಸಲಾಗುತ್ತಿದೆ. ಒಂದೇ ಜಿಲ್ಲೆ ವ್ಯಾಪ್ತಿಗೆ ವರ್ಗಾವಣೆಯಾಗದೇ ರಾಜ್ಯದ ಹಲವು ಠಾಣೆಗಳಲ್ಲಿನ ಪೊಲೀಸ್ ಸಿಬ್ಬಂದಿಗಳು ಬೇಸತ್ತಿದ್ದಾರೆ. ಅಂತಹವರಲ್ಲಿ, ದಂಪತಿಗಳಿಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪತ್ರದಲ್ಲೇನಿದೆ?

ಕಳೆದ 10 ರಿಂದ 15 ವರ್ಷಗಳ ಕಾಲ ತಂದೆ-ತಾಯಿ, ಹೆಂಡತಿ, ಮಕ್ಕಳು ಎಲ್ಲರನ್ನು ಬಿಟ್ಟು ನಾವು ಒಂದು ಕಡೆ ಕೆಲಸ ಮಾಡುತ್ತಿದ್ದೇವೆ. ದಂಪತಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರೂ, ದಂಪತಿಗೆ ಅಂತರ ಜಿಲ್ಲಾ ವರ್ಗಾವಣೆಯಾಗುತ್ತಿಲ್ಲ.

ದಂಪತಿ ಒಂದೇ ಘಟಕ ಹಾಗೂ ಒಂದೇ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರೂ, ಸರ್ಕಾರ, ಗೃಹ ಸಚಿವ ಹಾಗೂ ಪೊಲೀಸ್​ ಮುಖ್ಯಸ್ಥರು ಪತಿ-ಪತ್ನಿ ಅಂತರಜಿಲ್ಲಾ ವರ್ಗಾವಣೆ ಮಾಡುತ್ತಿಲ್ಲ. ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಮನವಿ ಮಾಡಿದರೂ ಕೂಡ ಬಾಯಿ ಮಾತಿನಲ್ಲೇ ವರ್ಗಾವಣೆ ಎಂದು ಹೇಳುತ್ತಿದ್ದಾರೆ. ಆದರೆ, ಈ ವಿಚಾರವಾಗಿ ಲಿಖಿತ ರೂಪದಲ್ಲಿ ಯಾವುದೇ ಆದೇಶ ಬರುತ್ತಿಲ್ಲ.

ಇದರಿಂದ ಪತಿ-ಪತ್ನಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಯಸ್ಸಾದ ತಂದೆ-ತಾಯಿಯನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ನೆಮ್ಮದಿಯಾಗಿ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ.

ಅಂತರ ಜಿಲ್ಲಾ ವರ್ಗಾವಣೆಯಾಗದೇ ದಂಪತಿ ಸಂಸಾರದಲ್ಲಿ ಬಿರುಕು ಮೂಡಿ ಎಷ್ಟೋ ಜನ ವಿಚ್ಛೇದನ ಪಡೆದಿದ್ದಾರೆ. ಇನ್ನು ಕೆಲವು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಇನ್ನೊಂದೆಡೆ ದಂಪತಿ ಮದುವೆಯಾಗಿ ಬೇರೆ ಬೇರೆ ಕಡೆ ಇರುವುದರಿಂದ 5 ವರ್ಷ ಕಳೆದರೂ ಕೂಡ ಮಕ್ಕಳಾಗುತ್ತಿಲ್ಲ.

ಈ ಸುದ್ದಿ ಓದಿದ್ದೀರಾ? ಆಸ್ತಿ ತೆರಿಗೆ | ಓಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ

ಬೇರೆ ಇಲಾಖೆಗಳಲ್ಲಿ ಅಂತರಜಿಲ್ಲಾ ವರ್ಗಾವಣೆ ನಡೆದಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಬೇರೆ ಇಲಾಖೆಗಳಂತೆ ಪ್ರತಿಭಟನೆ ಮಾಡಲು ಅವಕಾಶವಿಲ್ಲ. ಪೊಲೀಸ್ ಇಲಾಖೆಯಲ್ಲಿ 2021ರಿಂದ ಯಾವುದೇ ವರ್ಗಾವಣೆ ಆಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ನೆಮ್ಮದಿ ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿದೆ.

ಹಾಗಾಗಿ, ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೇಕು ಎಂದು ನೊಂದ ಮನಸ್ಸಿನಿಂದ ಬೇಡಿಕೊಳ್ಳುತ್ತೇವೆ ಎಂದು ಪೊಲೀಸ್​ ಸಿಬ್ಬಂದಿ ಮುಖ್ಯಮಂತ್ರಿ ಮತ್ತು ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...