ರಾಜ್ಯದ 4,056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

Date:

ರಾಜ್ಯದಲ್ಲಿರುವ 4,056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಪ್ರಸಕ್ತ ವರ್ಷದಿಂದಲೇ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು ಮತ್ತು ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1699 ಮ್ಯಾಗ್ನೆಟ್ ಶಾಲೆಗಳು ಸೇರಿ 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ನಡೆಸಲಾಗುತ್ತಿರುವ ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಎಲ್‌ಕೆಜಿ, ಯುಕೆಜಿ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುವುದು. ಪೂರ್ವ ಪ್ರಾಥಮಿಕ ತರಗತಿಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ನಡೆಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಆರೋಪ ಪಟ್ಟಿಯಲ್ಲಿ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹೊಣೆ

ಪೂರ್ವ ಪ್ರಾಥಮಿಕ ತರಗತಿಗಳನ್ನು ನಡೆಸಲು ಅಗತ್ಯ ಮೂಲಭೂತ ಸೌಕರ್ಯ ಮತ್ತು ಕಲಿಕಾ ಸೌಕರ್ಯಗಳನ್ನು ನಿಯಮಾನುಸಾರ ಒದಗಿಸಲು ಉಪನಿರ್ದೇಶಕರು(ಆಡಳಿತ) ಇವರಿಗೆ ಸೂಕ್ತ ನಿರ್ದೇಶನ ನೀಡುತ್ತಾರೆ. ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿ ಸಜ್ಜುಗೊಳಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ಹೇಳಿದೆ.

ಪ್ರಸ್ತುತ 2,619 ಸರಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದು ಈ ವರ್ಷದ ಬಜೆಟ್‌ನಲ್ಲಿ ತಿಳಿಸಲಾಗಿತ್ತು ಅದರಂತೆ ರಾಜ್ಯ ಸರ್ಕಾರವು ಈ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...