ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾದ ಸಾರಿಗೆ ಇಲಾಖೆ

Date:

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಸುವಂತೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಅಂತ್ಯವಾಗಲಿದೆ. ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ತೋರದ ಹಿನ್ನೆಲೆ, ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17 ರಿಂದ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾಗಿದೆ.

- Advertisement -

2019ರ ಏಪ್ರಿಲ್‌ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲೀಕರು ಆನ್‌ಲೈನ್ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಾಯಿಸಿ ಆನ್‌ಲೈನ್ ಮೂಲಕವೇ ಹೆಚ್‌ಎಸ್‌ಆರ್‌ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಎಚ್‌ಎಸ್‌ಆರ್‌ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ದೊರೆಯಲಿದೆ. ಜತೆಗೆ, ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಈಗಾಗಲೇ, ರಾಜ್ಯ ಸಾರಿಗೆ ಇಲಾಖೆ ಎಚ್ಎಸ್ಆರ್​ಪಿ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಕೊನೆಯ ದಿನಾಂಕ ನಿಗದಿ ಮಾಡಿದೆ. ಎಚ್‌ಎಸ್‌ಆರ್‌ಪಿ ಹಾಕಿಸಲು ಸಾರಿಗೆ ಇಲಾಖೆ 2023ರ ನ.17ರ ಗಡುವು ವಿಧಿಸಿತ್ತು. ಆದರೆ, ವಾಹನ ಮಾಲೀಕರು ನಿರಾಸಕ್ತಿ ತೋರಿದ ಹಿನ್ನೆಲೆ 2024ರ ಫೆ.17ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈಗಾಗಲೇ ಎರಡು ಬಾರಿ ಅವಧಿ ವಿಸ್ತರಣೆ ಮಾಡಿರುವ ಇಲಾಖೆ ಇದೀಗ ಫೆ.17 ಕೊನೆಯ ದಿನಾಂಕವಾಗಿದೆ.

ಜನರು ಯಾರು ಕೂಡ ಹೊಸ ನಂಬರ್ ಪ್ಲೇಟ್‌ ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಈ ಹಿನ್ನೆಲೆ, ಸಾರಿಗೆ ಇಲಾಖೆ ದಂಡ ಪ್ರಯೋಗಕ್ಕೆ ಮುಂದಾಗಿದ್ದು, ಫೆ.17 ರಿಂದ ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ ₹1 ಸಾವಿರ, ಎರಡನೇ ಬಾರಿ ಸಿಕ್ಕಿಬಿದ್ದರೆ ₹2 ಸಾವಿರ ದಂಡ ವಿಧಿಸುತ್ತದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ 70 ಮರ ಕಡಿಯಲು ಮುಂದಾದ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು

ಫೆ.17 ಎಚ್‌ಎಸ್‌ಆರ್‌ಪಿ ಹಾಕಿಸಲು ಕೊನೆಯ ದಿನಾಂಕವಾಗಿದ್ದು, ಇನ್ನು ಗಡುವು ಅಂತ್ಯವಾಗಲು 16 ದಿನಗಳು ಬಾಕಿ ಉಳಿದಿವೆ. ಆರ್​ಟಿಓ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೆಯ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಲೆಕ್ಕ ತೆಗೆದುಕೊಂಡರೆ ಅಂದಾಜು 1.70 ಕೋಟಿ ವಾಹನಗಳಿವೆ. ಆದರೆ, ಇಲ್ಲಿಯವರೆಗೂ ₹10 ಲಕ್ಷ ವಾಹನಗಳಷ್ಟೇ ಎಚ್‌ಎಸ್‌ಆರ್‌ಪಿ ಹಾಕಿಸಿಕೊಂಡಿವೆ ಎಂದು ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಗಡುವು ಮುಗಿಯುವಷ್ಟರಲ್ಲಿ ಎಚ್‌ಎಸ್‌ಆರ್‌ಪಿ ಹಾಕಿಸಿಕೊಳ್ಳದಿದ್ದರೆ ಅಂತಹವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಹಾಗೂ ಆರ್‌ಟಿಓ ಅಧಿಕಾರಿಗಳು ಜಂಟಿಯಾಗಿ ದಂಡಾಸ್ತ್ರ ಪ್ರಯೋಗ ಆರಂಭ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...