ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಾರ್ಚ್‌ 4ರಿಂದ ಸಾರಿಗೆ ನೌಕರರ ಅಹೋರಾತ್ರಿ ಮುಷ್ಕರ

Date:

ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮಾರ್ಚ್‌ 4ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಮುಷ್ಕರ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.

“ಈ ಹಿಂದಿನ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ, ಯಾವುದೇ ಕೆಲಸಗಳು ಇಲ್ಲಿಯವರೆಗೂ ಆಗಿಲ್ಲ. ಹಾಗಾಗಿ, ಇಗೀನ ಸರ್ಕಾರ ನೌಕರರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು” ಎಂದು ರಾಜ್ಯ ಸಾರಿಗೆ ನಿಗಮದ ಕೂಟ ಒತ್ತಾಯಿಸಿದೆ.

ಪ್ರಮುಖವಾಗಿ ಈ ಹಿಂದೆ ಸಾರಿಗೆ ನೌಕರರ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯಬೇಕು. ಸರಿಸಮಾನ ವೇತನ ಸೌಲಭ್ಯ ಕಲ್ಪಿಸಬೇಕು ಎಂದು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ 2020ರ ಡಿಸೆಂಬರ್ ಹಾಗೂ ನಂತರ ವರ್ಷದ 2021ರ ಏಪ್ರಿಲ್ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಕೈಗೊಂಡ ಎಲ್ಲ ಶಿಸ್ತಿನ ಕ್ರಮಗಳನ್ನು ಹಾಗೂ ದಾಖಲಾದ 60ಕ್ಕೂ ಹೆಚ್ಚು ಪ್ರಕರಣವನ್ನು ರದ್ದುಗೊಳಿಸಬೇಕು” ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್ ಹೇಳಿದರು.

“ನೌಕರರನ್ನು ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿಸಬೇಕು. ಅಲ್ಲದೇ, 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ ಹಿಂಬಾಕಿ ಮೊತ್ತವನ್ನು ತ್ವರಿತವಾಗಿ ಪಾವತಿ ಮಾಡಬೇಕು” ಎಂದು ತಿಳಿಸಿದರು.

“ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಬೇಕು. ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿರುವಂತೆ ಸಮಾನ ವೇತನ ಮತ್ತು ಸಾಲ ಸೌಲಭ್ಯವನ್ನು ಸಾರಿಗೆ ನೌಕರರಿಗೂ ಸರ್ಕಾರ ವಿಸ್ತರಣೆ ಮಾಡಬೇಕು. ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥಗೊಳಿಸಬೇಕು” ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.27 ಮತ್ತು ಫೆ.28 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಸಾರಿಗೆ ನೌಕರರ ಬೇಡಿಕೆಗಳು

  • 2020ರ ಜ.1ರಿಂದ ನಿವೃತ್ತ ನೌಕರರ ವೇತನ ಹೆಚ್ಚಳದ ಫಿಕ್ಸೇಷನ್ ಆಗಬೇಕು.
  • 38 ತಿಂಗಳ ತುಟ್ಟಿ ಭತ್ಯೆ ಬಾಕಿ ಹಣ ನೀಡಬೇಕು.
  • 2021ರ ಮುಷ್ಕರದ ವೇಳೆ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಎಲ್ಲ ರೀತಿಯ ಶಿಕ್ಷೆಗಳನ್ನು ಹಿಂಪಡೆಯಬೇಕು.
  • ಎಲೆಕ್ಟ್ರಿಕ್ ಬಸ್‌ಗಳನ್ನು ಸಾರಿಗೆ ನಿಗಮಗಳೇ ಓಡಿಸಬೇಕು.
  • ಕೇಂದ್ರ ಸರ್ಕಾರ ಫೇಮ್-2 ಯೋಜನೆ ( ಎಲೆಕ್ಟ್ರಿಕ್ ಬಸ್‌ಗಳನ್ನು) ಖಾಸಗಿಯವರ ಮೂಲಕ ಓಡಿಸುವ ಖಾಸಗೀಕರಣವನ್ನು ವಿರೋಧಿಸಬೇಕು.
  • ಭ್ರಷಾಚಾರದ ಆಡಳಿತಕ್ಕೆ ಕಡಿವಾಣ ಹಾಕಬೇಕು.
  • ಆಡಳಿತ ವರ್ಗ ಏಕ ಪಕ್ಷೀಯವಾಗಿ ಸುತ್ತೋಲೆಗಳನ್ನು ತರುವ ಪದ್ಧತಿ ನಿಲ್ಲಿಸಿ, ಕಾರ್ಮಿಕ ಸಂಘಗಳ ಜತೆ ಮಾತುಕತೆ ನಡೆಸಿ ಉತ್ತಮ ಕೈಗಾರಿಕಾ ಬಾಂಧವ್ಯ ರೂಪಿಸಬೇಕು.
  • ಸರ್ಕಾರಿ ನೌಕರರ ಸಂಬಳ ಸಾರಿಗೆ ನೌಕರರಿಗೂ ವಿಸ್ತರಣೆ ಮಾಡಬೇಕು.

ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ತರಲು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆ ಯಲ್ಲಿ ನೌಕರರು ಪಾಲ್ಗೊಳ್ಳುವಂತೆ ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ...

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು....

ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಜೋನ್‌ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ...