ರಂಗಭೂಮಿ, ಚಲನಚಿತ್ರ ನಟ ಯೇಸು ಪ್ರಕಾಶ್ ಇನ್ನಿಲ್ಲ

Date:

Advertisements

ಕಿರುತೆರೆ, ರಂಗಭೂಮಿ ಮತ್ತು ಚಲನಚಿತ್ರ ನಟ ಯೇಸುಪ್ರಕಾಶ್ (55) ಶನಿವಾರ ನಿಧನರಾದರು. ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

ಯೇಸು ಪ್ರಕಾಶ್ ಅವರು ಸಾಗರ ಸಮೀಪದ ಪುರಪ್ಪೆಮನೆಯ ಕಲ್ಲುಕೊಪ್ಪ ಗ್ರಾಮದವರಾಗಿದ್ದು ನೀನಾಸಂ ಬಳಗ, ಕೆ.ವಿ. ಸುಬ್ಬಣ್ಣ ರಂಗಸಮೂಹ ಸೇರಿ ಹಲವು ರಂಗ ತಂಡಗಳಲ್ಲಿ ಕೆಲಸ ಮಾಡಿದ್ದರು. ಜೊತೆಗೆ ಯಕ್ಷಗಾನ ಕಲಾವಿದರೂ ಕೂಡಾ ಹೌದು.

ನಟನೆಯ ಜತೆಯಲ್ಲಿ ಸಾಮಾಜಿಕ ಹೋರಾಟಗಳಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದರು. ಯೇಸು ಪ್ರಕಾಶ್ ಎಸ್.ನಾರಾಯಣ್ ನಿರ್ದೇಶನದ ‘ವೀರು’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿದ್ದರು.

Advertisements

ಇದನ್ನು ಓದಿದ್ದೀರಾ?  ‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಪುನೀತ್ ರಾಜ್​ಕುಮಾರ್ ಅಭಿನಯದ ‘ಯಾರೇ ಕೂಗಾಡಲಿ’, ದರ್ಶನ್​ ನಟನೆಯ ‘ಸಾರಥಿ’, ಯೋಧ, ಕಲ್ಪನಾ-2 ಸೇರಿ 35ಕ್ಕೂ ಹೆಚ್ಚು ಸಿನಿಮಾ ಹಾಗೂ 100ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದರು.

ಭಾನುವಾರ ಬೆಳಗ್ಗೆ ಅವರ ಸ್ವಗ್ರಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಇದೇ ವೇಳೆ ರಂಗ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಆದೇಶ ರದ್ದು, ಸೇವೆಗೆ ಮರು ನಿಯುಕ್ತಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿಯ ಅಂಬೇಡ್ಕರ ನಗರ ಸರ್ಕಾರಿ ಕಿರಿಯ...

ತಮ್ಮ ಯೋಗ್ಯತೆಗೆ ತಕ್ಕಂತೆ ಕೆಲವರು ಟೀಕೆ ಮಾಡುತ್ತಾರೆ: ಬಾನು ಮುಷ್ತಾಕ್

ಟೀಕೆ ಮಾಡುವವರ ಬಗ್ಗೆ ನನಗೇ ಬೇಜಾರು ಇಲ್ಲ. ಅವರವರ ಯೋಗ್ಯತೆಗೆ ತಕ್ಕಂತೆ...

Download Eedina App Android / iOS

X