ಮಾಧ್ಯಮಗಳಲ್ಲಿ ಸತ್ಯ, ನ್ಯಾಯ ಸಿಗುತ್ತದೆ ಎನ್ನುವ ಪರಿಸ್ಥಿತಿ ಈಗಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements
  • ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅಭಿಮತ
  • ‘ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ’

ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ, ಸಿಗುತ್ತದೆ ಎನ್ನುವ ಪರಿಸ್ಥಿತಿ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರಿತೀಯ ಅಂತ ಕೇಳಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

“ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂಬುದು ನನ್ನ ಭಾವನೆ. ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ” ಎಂದರು.

Advertisements

“ಸಮಾಜದಲ್ಲಿ ಇನ್ನೂ ಶೇ.25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ. ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ” ಎಂದು ಹೇಳಿದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದು ಅಂಬೇಡ್ಕರ್‌ ಹೇಳಿಕೆ ನೆನಪಿಸಿಕೊಂಡರು.

ಪ್ರೆಸ್‌ ಕ್ಲಬ್

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

“ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾಗಿದೆ. ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು” ಎಂದು ವಿನಂತಿಸಿಕೊಂಡರು.

ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು. ಹಿರಿಯ ಪತ್ರಕರ್ತ ಮತ್ತು ‘ಈ ದಿನ‌’ ಮಾಧ್ಯಮದ ಸಲಹಾ ಸಂಪಾದಕ ಡಿ.ಉಮಾಪತಿ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರುಗಳನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಹಿರಿಯ ಪತ್ರಕರ್ತ, ಕನ್ನಡಪ್ರಭ ಸಂಪಾದಕ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತ ಡಾ.ಹೇಮಂತ್ ಎಂ ನಿಂಬಾಳ್ಕರ್ ಉಪಸ್ಥಿತರಿದ್ದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿ ಪದಾಧಿಕಾರಿಗಳು ಕಾರ್ಯಕ್ರಮ ನಡೆಸಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X