ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ : ದೂರು ದಾಖಲು

Date:

ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿ ಕಿರುಕುಳ ನೀಡಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಬೆಸ್ಕಾಂ ಅಧಿಕಾರಿ ಮೃತ್ಯುಂಜಯ ಅವರಿಗೆ ಮೇ 1ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಈ ವೇಳೆ, ತನ್ನನ್ನು ತಾನು ಲೋಕಾಯುಕ್ತ ಪೊಲೀಸ್ ಎಂದು ಹೇಳಿಕೊಡಿದ್ದಾನೆ. ಅಲ್ಲದೇ, ಬೆಸ್ಕಾಂ ಕಚೇರಿಯಲ್ಲಿರುವ ಎಲ್ಲರ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಹೀಗೆ, ದುಷ್ಕರ್ಮಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಅವರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್, ತಾಂತ್ರಿಕ ಸಹಾಯಕ ಎಸ್.ವಿ.ನವನೀತ್ ಕೃಷ್ಣನ್ ಹಾಗೂ ಬೇರೆ ಬೇರೆ ಅಧಿಕಾರಿಗಳಿಗೆ ದುಷ್ಕರ್ಮಿ ಕರೆ ಮಾಡಿ ಮಾತಾಡಿದ್ದಾನೆ.

ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಕಚೇರಿಯನ್ನು ಸಂಪರ್ಕ ಮಾಡಿದಾಗ ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಬೆಸ್ಕಾಂ ಅಧಿಕಾರಿಗಳು ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟ್ರೂ ಕಾಲರ್‌ನಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಎಂಬ ಹೆಸರಿನಲ್ಲಿ ಕರೆ ಬರುತ್ತಿತ್ತು ಎಂದು ಬೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆ ಅನಾಹುತ; ₹1.18 ಕೋಟಿ ನಷ್ಟ ಅನುಭವಿಸಿದ ಬೆಸ್ಕಾಂ

“ಲೋಕಾಯುಕ್ತ ಪೊಲೀಸರ ಹೆಸರು ಹೇಳಿಕೊಂಡು ವಿನಾಕಾರಣ ಅಪರಿಚಿತರು ಬೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಬೆಸ್ಕಾಂ ಅಧಿಕಾರಿ ಮೃತ್ಯುಂಜಯ ಅವರು ಬೆದರಿಕೆ ಕರೆಗಳ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...