ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್‌ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಾಗಲೂರು ಮೂಲದ ಆರೋಪಿ ಬಂಧಿತ. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಉಳಿದಿಬ್ಬರು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಮೂವರೂ ಸ್ನೇಹಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಮೂವರು ಆರೋಪಿಗಳು ಕ್ರೇಜ್‌ಗಾಗಿ ಯುವತಿಯರ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್​ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಆರೋಪಿಗಳು ಇನ್ಸ್​ಸ್ಟಾಗ್ರಾಮ್ ಖಾತೆಯಿಂದ 15 ವರ್ಷದ ಬಾಲಕಿಯೊಬ್ಬಳ ಫೋಟೋ ತೆಗೆದುಕೊಂಡು ಅದನ್ನು ಅಶ್ಲೀಲ್‌ವಾಗಿ ಮಾರ್ಫ್‌ ಮಾಡಿ ನಕಲಿ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಬಾಲಕಿಯ ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಮೇ 31ರವರೆಗೆ ಬೆಂಗಳೂರಿಗೆ ಬರುವ ಕೆಲವು ರೈಲುಗಳು ರದ್ದು; ವಿವರ ಇಲ್ಲಿದೆ!

ಈ ಬಗ್ಗೆ ದೂರು ದಾಖಲು ಮಾಡಿಕೊಂಡಿರುವ ಸೈಬರ್‌ ಕ್ರೈಂ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಆರೋಪಿಗಳಿಂದ ಮೂರು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್‌ ಕೊಡಿಸುವ ಮುನ್ನ ಯೋಚಿಸಬೇಕು. ಮಕ್ಕಳು ಮೊಬೈಲ್‌ ಫೋನ್‌ ಅನ್ನು ಹೀಗೆ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಪೊಲೀಸ್​​ ಅಧಿಕಾರಿಗಳು ಎಚ್ಚರಿಸಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...