ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಗುಡುಗು, ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆ

Date:

ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ರಾಜ್ಯ ಅಥವಾ ದೇಶಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆ ಇಲ್ಲ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಹೇಳಿದೆ.

- Advertisement -

ಮುಂಬಯಿಯಲ್ಲಿ ಬೀಸಿದ ಭಾರೀ ಗಾಳಿಗೆ ಘಾಟ್‌ಕೋಪರ್‌ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಹೋರ್ಡಿಂಗ್ ಕುಸಿದಿದ್ದು, 14 ಮಂದಿಯನ್ನು ಬಲಿತೆಗೆದುಕೊಂಡಿದೆ. ಗುಡುಗು ಅಥವಾ ಧೂಳಿನ ಬಿರುಗಾಳಿಯಿಂದಾಗಿ ಇದೇ ರೀತಿಯ ಘಟನೆಗಳು ಸಂಭವಿಸಬಹುದು. ಹೀಗಾಗಿ, ಜನರು ಎಚ್ಚರಿಕೆಯಿಂದ ಸುರಕ್ಷಿತವಾಗಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹವಾಮಾನ ಶಾಸ್ತ್ರದ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ, “ದೀರ್ಘಕಾಲದ ಬಿಸಿ ಮತ್ತು ಶುಷ್ಕ ವಾತಾವರಣ ಹಾಗೂ ಕಡಿಮೆ ಆರ್ದ್ರತೆಯಿಂದಾಗಿ, ಮಹಾರಾಷ್ಟ್ರ, ಗುಜರಾತ್ ಹಾಗೂ ರಾಜಸ್ಥಾನದಂತಹ ರಾಜ್ಯಗಳಲ್ಲಿ ಧೂಳಿನ ಬಿರುಗಾಳಿ ಬೀಸುತ್ತಿರುವುದು ವರದಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ” ಎಂದು ಇಲಾಖೆ ಹೇಳಿದೆ.

“ಮಾನ್ಸೂನ್ ಪ್ರಾರಂಭವಾಗುವವರೆಗೆ ಘಾಟ್‌ಗಳು ಮತ್ತು ದಕ್ಷಿಣ ಪರ್ಯಾಯ ದ್ವೀಪ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ” ಎಂದು ಹೇಳಿದೆ.

ಐಎಮ್‌ಡಿ ಬೆಂಗಳೂರಿನ ಹಿರಿಯ ವಿಜ್ಞಾನಿ ಸಿ.ಎಸ್.ಪಾಟೀಲ್ ಮಾತನಾಡಿ, “ಮಣ್ಣು ಸಡಿಲವಾಗಿ, ಒಣಗಿದಾಗ ಹಾಗೂ ಬಲವಾದ ಗಾಳಿ ಮತ್ತು ಗಾಳಿಯಲ್ಲಿ ತೇವಾಂಶ ಕಡಿಮೆಯಾದಾಗ ಧೂಳಿನ ಬಿರುಗಾಳಿಗಳು ಸಂಭವಿಸುತ್ತವೆ. ಇದು ಕಳಪೆ ಗೋಚರತೆಗೆ ಕಾರಣವಾಗುತ್ತದೆ. ಕೆಲವೊಮ್ಮೆ, ಮುಂಬೈನಲ್ಲಿ ಸಂಭವಿಸಿದಂತೆ ತೀವ್ರವಾದ ಗುಡುಗು ಸಹಿತ ಮಳೆಯಾಗುತ್ತದೆ. ಕರ್ನಾಟಕದಲ್ಲಿ, ಧೂಳಿನ ಬಿರುಗಾಳಿಗಳು ಮತ್ತು ಮುಂಗಾರು ಪೂರ್ವ ಮಳೆಯಾಗಿದೆ, ಆದರೆ ತೀವ್ರವಾಗಿಲ್ಲ” ಎಂದಿದ್ದಾರೆ.

“ಮುಂಗಾರು ಆರಂಭಕ್ಕೂ ಮುನ್ನ ಗುಡುಗು, ಮಿಂಚು, ಧೂಳು ಬಿರುಗಾಳಿಗಳು ಉಂಟಾಗಲಿವೆ. ಆದರೆ, ಸ್ಥಳೀಯ ಅಂಶಗಳ ಆಧಾರದ ಮೇಲೆ ಅವುಗಳ ತೀವ್ರತೆಯು ಬದಲಾಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ರೈಲು ನಿಲ್ದಾಣಗಳಿಂದ 22 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

ಬೆಂಗಳೂರಿನ ಐಎಮ್‌ಡಿಯ ಅಧಿಕಾರಿಗಳು ಮಾತನಾಡಿ, “ಇದು ಕ್ಯುಮುಲೋನಿಂಬಸ್ ಮೋಡಗಳ ರಚನೆಯ ಮೇಲೆ ಅವಲಂಬಿತವಾಗಿರುತ್ತದೆ (‘ಕ್ಯುಮುಲಸ್’ ಎಂದರೆ ಲ್ಯಾಟಿನ್ ಭಾಷೆಯಲ್ಲಿ ‘ಉಬ್ಬುವುದು’ ಮತ್ತು ‘ನಿಂಬಸ್’ ಎಂದರೆ ‘ಮೋಡ’), ಇದು ದಟ್ಟವಾದ, ಎತ್ತರದ ಲಂಬವಾದ ಮೋಡಗಳು, ನೀರಿನ ಆವಿ ಘನೀಕರಣದಿಂದ ರೂಪುಗೊಳ್ಳುತ್ತದೆ. ಕೆಳ ಟ್ರೋಪೋಸ್ಪಿಯರ್‌ನಲ್ಲಿ ಶಕ್ತಿಯುತವಾದ ತೇಲುವ ಗಾಳಿಯ ಪ್ರವಾಹಗಳಿಂದ ಮೇಲ್ಮುಖವಾಗಿ ನಿರ್ಮಾಣವಾಗುತ್ತದೆ” ಎಂದಿದ್ದಾರೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈಗ ಗುಡುಗು ಸಹಿತ ಮಳೆಯಾಗುತ್ತಿದ್ದು, ಗಂಟೆಗೆ 45-50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...