ಸಾಲ ತೀರಿಸಲು ಯುಟ್ಯೂಬ್‌, ವೆಬ್‌ಸೀರಿಸ್‌ ನೋಡಿ ತಾಯಿಯ ಸ್ನೇಹಿತೆ ಮನೆಗೆ ಕನ್ನ

Date:

ಸಾಲ ತೀರಿಸಲು ಯುಟ್ಯೂಬ್‌, ವೆಬ್‌ಸೀರಿಸ್‌ಗಳನ್ನು ನೋಡಿ ಕಳ್ಳತನ ಮಾಡಲು ತೀರ್ಮಾನಿಸಿ, ತಾಯಿಯ ಸ್ನೇಹಿತೆಯ ಮನೆಗೆ ಕನ್ನ ಹಾಕಿದ್ದ ಆರೋಪಿಯೊಬ್ಬನನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

- Advertisement -

ಮದನ್‌ ಕುಮಾರ್‌(34) ಬಂಧಿತ. ಕೆ.ಪಿ.ಅಗ್ರಹಾರದ ಟೆಲಿಕಾಂ ಲೇಔಟ್‌ ನಿವಾಸಿ. ಈತ ಮೆಕಾನಿಕಲ್‌ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿದ್ದನು. ಸಾಲ ತೀರಿಸುವುದಕ್ಕೆ ತಾಯಿಯ ಸ್ನೇಹಿತೆ ಮನೆ ಬಾಗಿಲು ಒಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೆ.ಪಿ.ಅಗ್ರಹಾರ ಪೊಲೀಸರು ಈತನನ್ನು ಬಂಧಿಸಿ, ಈತನಿಂದ ₹6.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನಾಭರಣ, ₹30 ಸಾವಿರ ಮೌಲ್ಯದ 458 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ ₹1.35 ಲಕ್ಷ ನಗದು ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ?

ಮದನ್‌ ಕುಮಾರ್ ಮೆಕಾನಿಕಲ್‌ ಎಂಜಿನಿಯರ್‌ ಆಗಿದ್ದನು. ಕುಂಬಳಗೋಡಿನಲ್ಲಿ ಅಲ್ಯೂಮಿನಿಯಂ ಸಂಬಂಧಿತ ಕಾರ್ಖಾನೆ ನಡೆಸುತ್ತಿದ್ದನು. ಕಳೆದ ವರ್ಷ ವಿದ್ಯುತ್‌ ಅವಘಡದಿಂದ ಇಡೀ ಕಾರ್ಖಾನೆ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು.

ನಷ್ಟದಿಂದ ಕಂಗೆಟ್ಟಿದ್ದ ಆತ ಹಲವರ ಬಳಿ ಸಾಲ ಮಾಡಿದ್ದನು. ಈತನಿಗೆ ಸಾಲ ತೀರಿಸೋಕೆ ಆಗಲಿಲ್ಲ. ಇನ್ನೊಂದೆಡೆ ಕೆಲಸಕ್ಕೂ ಹೋಗುತ್ತಿರಲಿಲ್ಲ.

ಯುಟ್ಯೂಬ್‌, ವೆಬ್‌ಸೀರಿಸ್‌ ನೋಡಿ ಕಳ್ಳತನ ಮಾಡಲು ತೀರ್ಮಾನ ಮಾಡಿದ್ದನು. ಅದರಂತೆ, ತನ್ನ ತಾಯಿಯ ಸ್ನೇಹಿತೆ ಮನೆಗೆ ಕನ್ನ ಹಾಕಲು ಹೊಂಚು ಹಾಕಿದ್ದನು.

ಆರೋಪಿ ಮದನ್‌ ಆತನ ತಾಯಿಯ ಸ್ನೇಹಿತೆಯ ಮನೆಗೆ ಕನ್ನ ಹಾಕಲು ಯೋಜನೆ ರೂಪಿಸಿದ್ದನು. ದಂಪತಿಯ ದಿನನಿತ್ಯದ ಚಟುವಟಿಕೆ ತಿಳಿದಿದ್ದ ಆತ ಜ.17ರಂದು ಕಳ್ಳತನ ಮಾಡಲು ದಿನಾಂಕ ನಿಗದಿ ಮಾಡುತ್ತಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಜಯನಗರ ಹೋಟೆಲ್​ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಬಂಧನ

ನಗರದ ಟೆಲಿಕಾಂ ಲೇಔಟ್‌ನಲ್ಲಿ ವಾಸವಾಗಿರುವ ವೃದ್ಧ ದಂಪತಿ ಎಂದಿನಂತೆ ಬೆಳಗ್ಗೆ 8 ಗಂಟೆಗೆ ವಾಯುವಿಹಾರಕ್ಕೆ ಹೋಗಿದ್ದಾರೆ. ಇವರು ಬೆಳಗ್ಗೆ 8 ಗಂಟೆಗೆ ವಾಯುವಿಹಾರಕ್ಕೆ ತೆರಳಿದರೆ, ಮನೆಗೆ ಬೆಳಗ್ಗೆ 10 ಗಂಟೆಗೆ ವಾಪಸ್‌ ಬರುತ್ತಿದ್ದರು.

ಇದನ್ನು ಅರಿತಿದ್ದ ಆರೋಪಿ ಅವರು ವಾಕಿಂಗ್ ತೆರಳಿದ ತಕ್ಷಣ ಬಾಗಿಲನ್ನು ವುಡ್‌ ಕಟರ್‌ನಿಂದ ಕತ್ತರಿಸಿ ಮನೆ ಒಳಗೆ ನುಗ್ಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಕಳ್ಳತನ ಮಾಡಿದ್ದಾನೆ.

ವೃದ್ಧ ದಂಪತಿ ಮನೆಗೆ ಬಂದಾಗ ಕೃತ್ಯ ಬಯಲಾಗಿದೆ. ದಂಪತಿ ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಸಿಸಿ ಕ್ಯಾಮೆರಾದ ಡಿವಿಆರ್‌ ಕದ್ದು ಪರಾರಿಯಾಗಿದ್ದನು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...