ಚಾರಣ ದುರಂತ | 9 ಮೃತದೇಹ ಬೆಂಗಳೂರಿಗೆ ರವಾನಿಸಲು ಯೋಜನೆ: ಕೃಷ್ಣಬೈರೇಗೌಡ

Date:

ಉತ್ತರಾಖಂಡದಲ್ಲಿ ಮೃತಪಟ್ಟಿರುವ 9 ಚಾರಣಿಗರ ದೇಹಗಳನ್ನು ಎಂಬಾಮಿಂಗ್‌ಗಾಗಿ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ. ನಾಳೆ ಬೆಳಿಗ್ಗೆ ದೆಹಲಿ-ಬೆಂಗಳೂರು ವಿಮಾನಗಳಲ್ಲಿ ಮೃತದೇಹಗಳನ್ನು ರವಾನಿಸಲು ಸ್ಥಳವನ್ನು ಕಾಯ್ದಿರಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

- Advertisement -

ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, “ಎಂಬಾಮಿಂಗ್ ನಂತರ ಮೃತದೇಹಗಳನ್ನು ಆಂಬುಲೆನ್ಸ್‌ಗಳ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಗುತ್ತದೆ. ಗುರುವಾರ ಸಂಜೆ 5.50ರ ವಿಮಾನದಲ್ಲಿ ಬದುಕುಳಿದ ಎಲ್ಲ 13 ಜನ ಚಾರಣಿಗರು ಬೆಂಗಳೂರಿಗೆ ಹಿಂತಿರುಗಲು ಟಿಕೆಟ್ ಕಾಯ್ದಿರಿಸಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಧ್ಯಾಹ್ನ 2.30ಕ್ಕೆ ಮೃತದೇಹಗಳ ಹೊತ್ತ ಹೆಲಿಕಾಫ್ಟರ್ ಡೆಹ್ರಾಡೂನ್ ತಲುಪಿದೆ. ಕಾನೂನಾತ್ಮಕ ಪ್ರಕ್ರಿಯೆಗಳ ಕಾರಣದಿಂದಾಗಿ ಏರ್ ಲಿಫ್ಟ್ ನಲ್ಲಿ ವಿಳಂಬವಾಗಲಿದೆ. ಅಲ್ಲದೆ ಚಾರ್ಟರ್ಡ್ ಫ್ಲೈಟ್ ಲಭ್ಯವಾಗದ ಕಾರಣ ಇಂದು ಡೆಹ್ರಾಡೂನ್ ನಿಂದ ಬೆಂಗಳೂರಿಗೆ ಏರ್ ಕ್ರಾಫ್ಟ್ ಮೂಲಕ ಮೃತದೇಹಗಳ ಸ್ಥಳಾಂತರ ಇಲ್ಲ ಎನ್ನಲಾಗುತ್ತಿದೆ.

ಗೂಗಲ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಶಿರಸಿ ಯುವತಿ ಸಾವು

ಉತ್ತರಾಖಂಡದ ಸಹಸ್ತ್ರತಲ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟ ಕರ್ನಾಟಕದ ಚಾರಣಿಗರ ಪೈಕಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವತಿ ಪದ್ಮಿನಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪದ್ಮಿನಿ ಸಾವಿನ ಬಗ್ಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾಹಿತಿ ಸಿಕ್ಕಿದೆ.

ಶಿರಸಿ ತಾಲೂಕಿನ ಜಾಗನಹಳ್ಳಿ ನಿವಾಸಿ ಪದ್ಮಿನಿ ಹೆಗಡೆ(35) ಮೃತ ದುರ್ದೈವಿ. ಬೆಂಗಳೂರಿನಲ್ಲಿ ಗೂಗಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪದ್ಮಿನಿ ಮೇ 9ರಿಂದ ಜೂನ್ 7ರವರೆಗೆ ಟ್ರೆಕ್ಕಿಂಗ್‌ಗೆ ಅನುಮತಿ ಪಡೆದಿದ್ದರು. ಜೂ.4ರಂದು ಮುಂಬೈನಲ್ಲಿರುವ ತಾಯಿ ಜೊತೆ ಮಾತನಾಡಿದ್ದರು. ಕುಟುಂಬಕ್ಕೆ ಯುವತಿ ನಾಪತ್ತೆಯ ಮಾಹಿತಿಯಷ್ಟೇ ನೀಡಲಾಗಿದ್ದು ಇನ್ನೂ ಸಾವಿನ ವಿಚಾರ ತಿಳಿಸಿಲ್ಲ.

ಮೃತಪಟ್ಟವರ ಹೆಸರು

1. ಸಿಂಧು ವಕೆಲಂ
2. ಆಶಾ ಸುಧಾಕರ್
3. ಸುಜಾತಾ ಮುಂಗುರವಾಡಿ
4. ವಿನಾಯಕ್‌ ಮುಂಗುರವಾಡಿ
5. ಚಿತ್ರಾ ಪ್ರಣೀತ್
6. ಪದ್ಮನಾಭ ಕೆ.ಪಿ
7. ವೆಂಕಟೇಶ್ ಪ್ರಸಾದ್ ಕೆ
8. ಅನಿತಾ ರಂಗಪ್ಪ
9. ಪದ್ಮಿನಿ ಹೆಗ್ಡೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...