ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ‘ಏಕರೂಪದ ದರ’ ನಿಗದಿಪಡಿಸಿದ ಸಾರಿಗೆ ಇಲಾಖೆ

Date:

Advertisements

ಪ್ರಯಾಣದರ ಹೆಚ್ಚಿಸಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಹಿನ್ನೆಲೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಇರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾ ಮಾದರಿಯ ಟ್ಯಾಕ್ಸಿ ಪ್ರಯಾಣ ದರ ಮತ್ತು ಸಾಗಾಣಿಕ ದರ ಏಕರೂಪಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆ ಮೇರೆಗೆ ಏಕರೂಪ ಪ್ರಯಾಣ ದರ ನಿಗದಿಪಡಿಸಿ ತಕ್ಷಣದಲ್ಲೇ ಅನ್ವಯವಾಗುವಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ಅವರು ಆದೇಶ ಹೊರಡಿಸಿದ್ದಾರೆ.

2021ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರ ವಾಹನಗಳ ಮೌಲ್ಯ ಆಧರಿಸಿ ದರ ನಿಗದಿ ಮಾಡಿತ್ತು. ಸಿಟಿ ಟ್ಯಾಕ್ಸಿ ಸೇವೆ ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ 2021ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ‌ ನಿಗದಿ ಮಾಡಿತ್ತು. ಆದರೆ ಪ್ರಾಧಿಕಾರ ನಿಗದಿಪಡಿಸಿರುವ ದರಕ್ಕಿಂತ 3-4 ಪಟ್ಟು ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಸಿಟಿ ಟ್ಯಾಕ್ಸಿ ಸೇವೆಯಲ್ಲಿ ನಡೆಯುತ್ತಿರುವ ಹಗಲು ದರೋಡೆ ಸಂಬಂಧ ಜನರಿಂದ ವ್ಯಾಪಕ ದೂರುಗಳು ಬಂದಿವೆ. ಹೀಗಾಗಿ, ಅಗ್ರಿಗೇಟರ್‌ ಕಂಪನಿ ಹಾಗೂ ಇತರೆ ಟ್ಯಾಕ್ಸಿ ಚಾಲಕರ ಆಟಾಟೋಪಕ್ಕೆ ಬ್ರೇಕ್‌ ಹಾಕಲು ಏಕರೂಪದ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಏಕರೂಪ ದರ ನಿಗದಿ ಪಡಿಸಿದ ಸರ್ಕಾರದ ನಿರ್ಧಾರವನ್ನು ಚಾಲಕರು ಸ್ವಾಗತಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಎರಡು ಪ್ರತ್ಯೇಕ ಅಪಘಾತ: ಐದು ಮಂದಿ ಸಾವು

  • 10 ಲಕ್ಷಕ್ಕಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ₹100 ನಿಗದಿ ಮಾಡಲಾಗಿದೆ. 4 ಕಿಮೀ ನಂತರ ಪ್ರತಿ ಕಿಮೀಗೆ ಹೆಚ್ಚುವರಿ ₹24 ನಿಗದಿ ಮಾಡಲಾಗಿದೆ.
  •  ₹10 ಲಕ್ಷದಿಂದ ₹15 ಲಕ್ಷ ವರೆಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ₹115 ನಿಗದಿ, 4 ಕಿಮೀ ನಂತರ ಪ್ರತಿ 1 ಕಿಮೀಗೆ ಹೆಚ್ಚುವರಿ ₹28 ನಿಗದಿ ಮಾಡಲಾಗಿದೆ.
  • ₹15 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ ₹130 ನಿಗದಿಯಾಗಿದ್ದು, 4 ಕಿಮೀ ನಂತರ ಪ್ರತಿ ಕಿಲೋ ಮೀಟರ್‌ಗೆ ಹೆಚ್ಚುವರಿ ₹32 ನಿಗದಿ ಮಾಡಲಾಗಿದೆ.
  • ಬೆಳಗಿನ ಜಾವ 6 ಗಂಟೆ ವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ ನೀಡಲಾಗಿದೆ.
  • ಲಗೇಜ್ ದರಗಳು ಮೊದಲಿನ 120 ಕೆ.ಜಿ. ವರೆಗೆ ಉಚಿತ (ಸೂಟ್ ಕೇಸ್, ಬೆನ್ನಿಂಗ್ ಇತ್ಯಾದಿ ವೈಯಕ್ತಿಕ ಲಗೇಜುಗಳು) ನಂತರದ ಪ್ರತಿ 30 ಕಿ.ಗ್ರಾಂಗೆ ಅಥವಾ ಅದರ ಭಾಗಕ್ಕೆ ₹7 ನಿಗದಿ ಪಡಿಸಲಾಗಿದೆ.
  • ಕಾಯುವಿಕೆಯ ದರಗಳು ಮೊದಲ 5 ನಿಮಿಷಗಳವರೆಗೆ ಉಚಿತ. ನಂತರದ ಪ್ರತಿ 1 ನಿಮಿಷಕ್ಕೆ ₹1 ಇದೆ.
  • ರಾತ್ರಿ 12 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ ಪ್ರಯಾಣ ದರದ ಮೇಲೆ ಶೇ.10 ರಷ್ಟು ಹೆಚ್ಚುವರಿ ದರ ಇದೆ.
  • ಸಿಟಿ ಟ್ಯಾಕ್ಸಿಯವರು / ಪ್ರವರ್ತಕರು, ಅಗ್ರಿಗೇಟರ್‌ಗಳು ಅನ್ವಯಿಸುವಂತಹ ಜಿ.ಎಸ್.ಟಿ. ಮತ್ತು ಟೋಲ್ ಶುಲ್ಕವನ್ನು ಪ್ರಯಾಣಿಕರಿಂದ ವಸೂಲಿ ಮಾಡಬಹುದಾಗಿದೆ.
  • ಸಮಯದ ಆಧಾರದಲ್ಲಿ ದರಗಳನ್ನು ವಸೂಲಿ ಮಾಡಬಾರದು. ಸರ್ಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಮಾತ್ರ ಪ್ರಯಾಣಿಕರಿಂದ ವಸೂಲಿ ಮಾಡುವುದು.
  • ಸರ್ಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಹೊರತುಪಡಿಸಿ ಅನಧಿಕೃತವಾಗಿ ಯಾವುದೇ ದರಗಳನ್ನು ಪ್ರಯಾಣಿಕರಿಂದ ಪಡೆಯತಕ್ಕದ್ದಲ್ಲ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X