ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಮೃತ ಹಸೀನಾ ಅವರ ಅತ್ತೆ ಹಾಜಿರಾ (70) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹರಿಯಾಣ: ನಕಲಿ ಮದ್ಯ ಸೇವಿಸಿ 18 ಸಾವು
ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್ಪಿ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.