ಉಡುಪಿ | ಖಾಸಗಿ ಬಸ್ ಕಂಡಕ್ಟರ್​ಗಳ ಗಲಾಟೆ; ಪುರುಷ ನಿರ್ವಾಹಕನಿಗೆ ಚಪ್ಪಲಿ ತೋರಿಸಿದ ಲೇಡಿ ಕಂಡಕ್ಟರ್

Date:

ಮಹಿಳಾ ಬಸ್‌ ನಿರ್ವಾಹಕಿಯೊಬ್ಬರು ಮತ್ತೊಂದು ಬಸ್‌ನ ಕಂಡಕ್ಟರ್ ಮೇಲೆ ಹಲ್ಲೆಗೈದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

- Advertisement -

ಉಡುಪಿಯ ಸಂತೆಕಟ್ಟೆ ಬಸ್‌ ನಿಲ್ದಾಣದಲ್ಲಿ ಭಾರತಿ ಬಸ್‌ನ ಕಂಡಕ್ಟರ್ ರೇಖಾ ಅವರು ದುರ್ಗಾಪ್ರಸಾದ್ ಬಸ್‌ನ ಕಂಡಕ್ಟರ್ ರಾಘವೇಂದ್ರ ನಡುವೆ ಗಲಾಟೆ ನಡೆದಿದೆ. ಜಗಳದಲ್ಲಿ ಅಶ್ಲೀಲವಾಗಿ ಪರಸ್ಪರ ನಿಂದಿಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕುಂದಾಪುರ ಮತ್ತು ಮಂಗಳೂರು ನಡುವೆ ಸಂಚರಿಸುವ ಎರಡು ಬಸ್‌ಗಳ ಕಂಡಕ್ಟರ್‌ಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಖಾಸಗಿ ಬಸ್‌ಗಳ ಟೈಮಿಂಗ್ ವಿಚಾರದಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ.

ತಮಗಿಂತ ಮೊದಲೇ ಬಂದು ಬಸ್ ನಿಲ್ಲಿಸಿದ್ದಕ್ಕಾಗಿ ಮಹಿಳಾ ಕಂಡಕ್ಟರ್ ರೇಖಾ ಎಂಬವರು ಮತ್ತೊಂದು ಬಸ್‌ನ ಕಂಡಕ್ಟರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ರೇಖಾ ಅವರು ಚಪ್ಪಲಿ ಹಿಡಿದು ರಾಘವೇಂದ್ರ ಎಡೆಗೆ ತೋರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳನ್ನು ರಕ್ಷಿಸಿದ ಸಿಸಿಬಿ

ಈ ಘಟನೆ ಕಂಡ ಪ್ರಯಾಣಿಕರು ಕೆಲಕಾಲ ತಬ್ಬಿಬಾಗಿದ್ದಾರೆ. ಘಟನೆ ಬಳಿಕ ಕಂಡಕ್ಟರ್ ರಾಘವೇಂದ್ರ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂಪೂರ್ಣ ಗಲಾಟೆಯ ದೃಶ್ಯ ದುರ್ಗಾಪ್ರಸಾದ್ ಬಸ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೇಖಾ ಅವರು ಉಡುಪಿಯ ಮೊದಲ ಮಹಿಳಾ ಬಸ್ ಕಂಡಕ್ಟರ್ ಎಂದು ಗುರುತಿಸಿಕೊಂಡಿದ್ದಾರೆ. ಅವರು ಹಲವಾರು ವರ್ಷಗಳಿಂದ ಭಾರತಿ ಮೋಟಾರ್ಸ್ ಬಸ್‌ನಲ್ಲಿ ಉಡುಪಿ ಮತ್ತು ಕುಂದಾಪುರ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...