ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

Date:

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರೇಟಿಗಳು ಸೇರಿದಂತೆ ಹಲವರು ಬಂದು ತಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿ ಉಡುಪಿಯಲ್ಲಿ ಮತ ಹಾಕಿದ ಬಳಿಕ ಮಾತನಾಡಿದ ಅವರು, “ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಈ ಬಗ್ಗೆ ಯಾವುದೇ ಅನುಮಾನವೇ ಬೇಡ” ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ.

“ಎಲ್ಲರೂ ತಪ್ಪದೇ ಮತದಾನ ಮಾಡಿ, ಈ ಹಿಂದೆ ಗೆದ್ದವರು ಕಳೆದ ಐದು ವರ್ಷದಲ್ಲಿ ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬ ಬಗ್ಗೆ ನೋಡಿ ಮತ ಹಾಕುತ್ತೇನೆ. ಈ ಬಗ್ಗೆ ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆಗೆ ವಿಚಾರಿಸಿ ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು” ಎಂದಿದ್ದಾರೆ.

“ಬೆಂಗಳೂರಿನಿಂದ ಉಡುಪಿಗೆ ಏ.25ರ ರಾತ್ರಿ ಹೊರಟು ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯಿತು. ಪ್ರತಿ ಬಾರಿ ಮತದಾನ ಮಾಡಲು ಉಡುಪಿಗೆ ಬರುತ್ತೇನೆ. ಮತದಾನ ನಮ್ಮ ಹಕ್ಕು ನಮ್ಮ ಜವಾಬ್ದಾರಿ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಉಡುಪಿಯ ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

ಸದ್ಯ ರಕ್ಷಿತ್ ಶೆಟ್ಟಿ ಅವರು ‘ರಿಚರ್ಡ್ ಆಂಟನಿ’ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಷಾ ಅಲ್ಫಸಂಖ್ಯಾತ ಶಿಕ್ಷಣ ಸಂಸ್ಥೆಗಳ ಷರತ್ತು ಸಡಿಲಿಸಲು ಸಚಿವ ಜಮೀರ್‌ಗೆ ಪುಟ್ಟಣ್ಣ ನಿಯೋಗ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ...

ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ...

ಕಲ್ಯಾಣ ಕರ್ನಾಟಕದ 1,008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ...