ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತ ಪ್ರಯಾಣ; ₹7.83 ಲಕ್ಷ ದಂಡ ವಸೂಲಿ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ₹7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, ”ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ಜನವರಿ ತಿಂಗಳಿನಲ್ಲಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ತಪಾಸಣೆ ನಡೆಸಿವೆ” ಎಂದು ಹೇಳಿದೆ.

”ಜನವರಿಯಲ್ಲಿ ಒಟ್ಟು 17,967 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 3,696 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ₹7,35,870 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1177 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಂಕಿ ಅವಘಡ: ಸುಟ್ಟು ಕರಕಲಾದ 40ಕ್ಕೂ ಹೆಚ್ಚು ವಾಹನಗಳು

”ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 477 ಪುರುಷ ಪ್ರಯಾಣಿಕರಿಂದ ಒಟ್ಟು ₹47,700 ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ, ಡಿಸೆಂಬರ್‌ ತಿಂಗಳಿನಲ್ಲಿ 4173 ಪ್ರಯಾಣಿಕರಿಂದ ಒಟ್ಟು ₹7,83,570 ದಂಡವನ್ನು ವಸೂಲಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...

ಬೆಂಗಳೂರು | ಪ್ರಭುದ್ಯಾ ಕೊಲೆ ಪ್ರಕರಣ; 2 ಸಾವಿರಕ್ಕಾಗಿ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಅಪ್ರಾಪ್ತ

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರ...

ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು: ಆಹಾರ ಗುಣಮಟ್ಟ ಇಲಾಖೆ ದಾಳಿ

ಬೆಂಗಳೂರು ಮೂಲದ ಹೋಟೆಲ್‌ ರಾಮೇಶ್ವರಂ ಕೆಫೆ ಹೈದರಾಬಾದ್‌ನ ಮೇದಾಪುರ್‌ ಶಾಖೆಯ ಮೇಲೆ...