ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತ ಪ್ರಯಾಣ; ₹7 ಲಕ್ಷ ದಂಡ ವಸೂಲಿ

Date:

Advertisements

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ಡಿಸೆಂಬರ್‌ನಲ್ಲಿ ಒಟ್ಟು ₹7,37,040 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, “ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ಡಿಸೆಂಬರ್‌ ತಿಂಗಳಿನಲ್ಲಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ತಪಾಸಣೆ ನಡೆಸಿವೆ” ಎಂದು ಹೇಳಿದೆ.

“ಡಿಸೆಂಬರ್‌ನಲ್ಲಿ ಒಟ್ಟು 16,785 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 3502 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ₹7,02,340 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1085 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ತಲುಪಿಸಿದ ನಟ ಯಶ್

“ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 347 ಪುರುಷ ಪ್ರಯಾಣಿಕರಿಂದ ಒಟ್ಟು ₹34,700 ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ, ಡಿಸೆಂಬರ್‌ ತಿಂಗಳಿನಲ್ಲಿ 3849 ಪ್ರಯಾಣಿಕರಿಂದ ಒಟ್ಟು ₹7,37,040 ದಂಡವನ್ನು ವಸೂಲಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X