ಬೆಂಗಳೂರು | ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ

Date:

ರಾಜ್ಯದಲ್ಲಿ ಕೊರೋನಾ ಬಳಿಕ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಅಲ್ಲದೇ, ಸಡನ್‌ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕ್ಯಾನ್ಸರ್, ಬ್ರೈನ್ ಸ್ಟ್ರೋಕ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳು ರಾಜ್ಯದಲ್ಲಿ ಏರಿಕೆ ಕಾಣುತ್ತಿವೆ. ಖಾಯಿಲೆ ಕೊನೆಯ ಹಂತದಲ್ಲಿ ಕಂಡು ಬರುವುದು ಜನರ ಸಾವಿಗೆ ಕಾರಣವಾಗುತ್ತಿದೆ. ಹೀಗಾಗಿ, ಆರೋಗ್ಯ ಇಲಾಖೆ ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆಗಳ ಪತ್ತೆಗೆ ಎಐ (AI) ತಂತ್ರಜ್ಞಾನ ಬಳಕೆ ಮಾಡಲಿದೆ.

- Advertisement -

ತುರ್ತು ಖಾಯಿಲೆ ಪತ್ತೆ ಮಾಡಲು ಹಾಗೂ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲು ಎಐ ತಂತ್ರಜ್ಞಾನ ಅನುಕೂಲವಾಗಲಿದೆ. ಇದು ಲಂಗ್ಸ್, ಟಿಬಿ, ಕ್ಯಾನ್ಸರ್, ಶ್ವಾಸಕೋಶ ಸಂಬಂಧಿ, ಗ್ಯಾಸ್ಟ್ರಿಕ್, ಹೃದಯ ಸಂಬಂಧಿ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ಅದನ್ನು ಪತ್ತೆ ಮಾಡುತ್ತದೆ. ಇದರಿಂದ ವೈದ್ಯರಿಗೆ ಮುನ್ಸೂಚನೆ ಸಿಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪರೀಕ್ಷೆ ವೇಗ ಹೆಚ್ಚಿಸುವ ಉದ್ದೇಶದಿಂದ ಅಸ್ಟ್ರಾಜೆನೆಕಾ ಇಂಡಿಯಾ ಹಾಗೂ ರಾಜ್ಯ ಸರ್ಕಾರ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕ್ಯಾನ್ಸರ್​ಗೆ ತುತ್ತಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆ ಸೇರಿದಂತೆ 29 ಜಿಲ್ಲಾ ಆಸ್ಪತ್ರೆಗಳಲ್ಲಿ ಎಐ ಬಳಕೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಎಐ ಕೃತಕ ಬುದ್ಧಿಮತ್ತೆಯಿಂದ ಶ್ವಾಸಕೋಶ ಕ್ಯಾನ್ಸರ್ ತಪಾಸಣೆ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಿದ್ದು, ಆರಂಭಿಕ ಹಂತದಲ್ಲೇ ಶ್ವಾಸಕೋಶ ಕ್ಯಾನ್ಸರ್ ಪತ್ತೆಗೆ ಇದು ಅನುಕೂಲವಾಗಲಿದೆ. ಕ್ಯಾನ್ಸರ್‌ನ್ನು ಆರಂಭಿಕವಾಗಿ ಪತ್ತೆ ಹಚ್ಚಲಿದೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ: ದೂರು ದಾಖಲು

ಕೆಲಸ ಆರಂಭಿಸಿದ ಎಐ

ರಾಜ್ಯದಲ್ಲಿ ಮೊದಲ ಬಾರಿಗೆ ಕೆಸಿ ಜನರಲ್ ಸರ್ಕಾರಿ ಆಸ್ಪತ್ರೆಯಲ್ಲಿ ಎಐ ಕೆಲಸ ಆರಂಭಿಸಿದೆ. 2,148 ರೋಗಿಗಳ ಸ್ಕ್ಯಾನಿಂಗ್ ಪೈಕಿ 909 ಅಸಹಜ ಲಕ್ಷಣ ಸಮಸ್ಯೆ ಹೊಂದಿರುವವರನ್ನು ಇದು ಗುರುತು ಮಾಡಿದೆ. 328 ರೋಗಿಗಳಲ್ಲಿ ಟಿಬಿ ಲಕ್ಷಣ ಚಿಕಿತ್ಸೆಯ ಅವಶ್ಯಕತೆಯನ್ನು ಗುರುತು ಮಾಡಿದೆ.

ಎಐ ಕೃತಕ ಬುದ್ಧಿಮತ್ತೆಯಿಂದ ಶ್ವಾಸಕೋಶ ಕ್ಯಾನ್ಸರ್ ತಪಾಸಣೆ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಿದ್ದು, ಆರಂಭಿಕ ಹಂತದಲ್ಲೇ ಶ್ವಾಸಕೋಶ ಕ್ಯಾನ್ಸರ್ ಪತ್ತೆಗೆ ಇದು ಅನುಕೂಲವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...