ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

Date:

Advertisements

ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ‘ ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ಭಾಜನರಾಗಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, “ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಆಯ್ಕೆ ಮಾಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆ ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ ‘ವಡ್ಡರ್ಸೆ ರಘುರಾಮಶೆಟ್ಟಿ’ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.

Advertisements

ಡಿ.ಉಮಾಪತಿ ಅವರ ಪರಿಚಯ

ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ.ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಮೂಲಕ ಪಡೆದಿದ್ದಾರೆ.

ಇಂಟರ್ನ್‌ಶಿಪ್‌ಗಾಗಿ ಕನ್ನಡಪ್ರಭಕ್ಕೆ ಹೋದವರಿಗೆ, ಅವರ ಪ್ರತಿಭೆ ಹಾಗೂ ಸಾಮರ್ಥ್ಯದ ಕಾರಣಕ್ಕೆ ಕೆಲಸವೇ ಸಿಕ್ಕಿತು. ‘ನ್ಯೂ ಇಂಡಿಯನ್ ಎಕ್ಸಪ್ರೆಸ್’ ಸಮೂಹ ಸಂಸ್ಥೆಯ ‘ಕನ್ನಡ ಪ್ರಭ’ದಲ್ಲಿ ಪತ್ರಕರ್ತರಾಗಿ ಕೆಲಸ ಆರಂಭಿಸಿದರು. ನಂತರ ದೆಹಲಿಗೆ ತೆರಳಿ ಕನ್ನಡ ಪ್ರಭ, ವಿಜಯ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಗಳಿಗೆ ದೆಹಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟುಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು ಹಾಗೂ ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ಡಿ. ಉಮಾಪತಿ ಅವರು ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಆಂದೋಲನ , ರೈತ ಚಳವಳಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ’ನ್ಯಾಯಪಥ‘ (ಗೌರಿ ಮಿಡಿಯಾ) ಮತ್ತು ’ಈ ದಿನ.ಕಾಮ್‌’ ಮಾಧ್ಯಮ ಸಂಸ್ಥೆಯ ಕನ್ಸಲ್ಟಿಂಗ್ ಎಡಿಟರ್‌ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

ವಡ್ಡರೆ
ವಡ್ಡರ್ಸೆ ರಘುರಾಮಶೆಟ್ಟಿ

ಓದುಗರ ಸಂಪಾದಕ ವಡ್ಡರ್ಸೆ ರಘುರಾಮಶೆಟ್ಟಿ

ಓದುಗರ ಸಂಪಾದಕ ಎಂದೇ ದಿ. ವಡ್ಡರ್ಸೆ ರಘುರಾಮಶೆಟ್ಟಿ ಅವರು ಹೆಸರಾಗಿದ್ದರು. 1960ರ ದಶಕದಿಂದ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ. ಮಾಧ್ಯಮವು ವಾಣಿಜ್ಯೋದ್ಯಮಿಗಳ ಹಾಗೂ ಈ ರಂಗದ ಪರಿಚಯವಿಲ್ಲದವರ ಆಡುಂಬೊಲವಾಗಬಾರದು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದರು. ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ‘ಮುಂಗಾರು’ ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು. ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತುವ, ದನಿಯಿಲ್ಲದವರ ದನಿಯಾಗಿದ್ದರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X