ಸಂತ್ರಸ್ತೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ಬೆನ್ನಲ್ಲೆ ಎಸ್‌ಐಟಿ ಮುಂದೆ ಭವಾನಿ ರೇವಣ್ಣ ಪ್ರತ್ಯಕ್ಷ

Date:

ನಾಪತ್ತೆಯಾಗಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ದೊರೆತ ಬೆನ್ನಲ್ಲೆ, ಜೂನ್ 7ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

- Advertisement -

ವಕೀಲರ ಜತೆಗೆ ಸಿಐಡಿ ಕಚೇರಿಗೆ ತೆರಳಿರುವ ಭವಾನಿ ರೇವಣ್ಣ ಅವರನ್ನು ಸದ್ಯ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ವಿಚಾರಣೆಗಾಗಿ ಭವಾನಿ ರೇವಣ್ಣಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಆದರೂ, ಸಹ ಪ್ರತಿಕ್ರಿಯೆ ನೀಡಿರಲಿಲ್ಲ.

ಹದಿನೈದು ದಿನಗಳಿಂದ ತಲೆಮರೆಸಿಕೊಂಡಿರುವ ಭವಾನಿಯವರನ್ನು ಬಂಧಿಸಲು ಎಸ್‌ಐಟಿ ಪೊಲೀಸ್ ತಂಡಗಳನ್ನು ರಚನೆ ಮಾಡಿತ್ತು. ಬೆಂಗಳೂರಿಗೆ ಹಿಂದಿರುಗುವ ಮೊದಲು ಎಸ್‌ಐಟಿ ಇತ್ತೀಚೆಗೆ ಹೊಳೆನರಸೀಪುರದ ಅವರ ನಿವಾಸದಲ್ಲಿ ಭವಾನಿಗಾಗಿ ಕನಿಷ್ಠ ಏಳು ಗಂಟೆಗಳ ಕಾಲ ಕಾದು ವಾಪಸಾಗಿತ್ತು.

ಮೈಸೂರು ಜಿಲ್ಲೆಯ ಕೆ.ಆರ್.ನಗರ ಪೊಲೀಸರು ಮಹಿಳೆಯ ಅಪಹರಣ ಮತ್ತು ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ಬೇಕಾಗಿರುವ ಭವಾನಿ ರೇವಣ್ಣ ವಿರುದ್ಧ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಪ್ರಕರಣದಲ್ಲಿ ಭವಾನಿ ಭಾಗಿಯಾಗಿರುವ ಬಗ್ಗೆ ಎಸ್‌ಐಟಿ ವಿವರವಾದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ಎಸ್‌ಐಟಿ ಕೈಗೆ ಇಷ್ಟು ದಿನ ಸಿಗದೇ ತಲೆಮರೆಸಿಕೊಂಡಿದ್ದರು. ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಗುಡುಗು ಸಿಡಿಲಿನ ಜತೆಗೆ ಮುಂದುವರೆದ ಮಳೆ

ಹೈಕೋರ್ಟ್‌ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಇದರೊಂದಿಗೆ ಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ವಿಚಾರಣೆ ಹಾಜರಾಗಬೇಕು, ಎಸ್‌ಐಟಿ ಅಧಿಕಾರಿಗಳ ತನಿಖೆ, ವಿಚಾರಣೆಗೆ ಸಹಕರಿಸಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ, ಭವಾನಿ ರೇವಣ್ಣ ಅವರು ಕೆ.ಆರ್.ನಗರ ಹಾಗೂ ಹಾಸನಕ್ಕೆ ಕಾಲಿಡುವಂತಿಲ್ಲ ಎಂದು ಹೈಕೊರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...