ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

Date:

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದು, ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಮುಖ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಎಫ್‌ಐಆರ್ ದಾಖಲು

ಧರ್ಮ, ಭಾಷೆ, ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆ, ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಹಾಗೂ ಬಿಜೆಪಿ ಫಾರ್‌ ಕರ್ನಾಟಕ ಖಾತೆ ಮೇಲೆ ಎಫ್​ಐಆರ್​ ದಾಖಲಾಗಿದೆ.

ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಅಲ್ಲದೇ, ಏ.19ರಂದು ಬಿಜೆಪಿ ಕರ್ನಾಟಕದ ಅಧಿಕೃತ ಎಕ್ಸ್ ಹ್ಯಾಂಡಲ್‌ನಿಂದ ಅವಹೇಳನಕಾರಿ ಪೋಸ್ಟ್ ಮಾಡಲಾಗಿತ್ತು. ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದ ಮೇಲೆ ಆರ್‌ಪಿ ಕಾಯಿದೆಯ u/s 125 ಮತ್ತು ಐಪಿಸಿ 505, 153(ಎ) ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿಜಯೇಂದ್ರ ಹಾಗೂ ಬಿಜೆಪಿ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರ ವಿರುದ್ಧ ಗಾಂಧಿನಗರದ ಚುನಾವಣಾ ನೊಡೆಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್‌ ದಾಖಲು

ಆರ್.ಆರ್.ನಗರದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಸಿಸಿ ಉಲ್ಲಂಘನೆ ಮಾಡಿದ್ದಾರೆ. ಈ ಹಿನ್ನೆಲೆ, ಅವರ ವಿರುದ್ಧ ಬೆಂಗಳೂರಿನ ಎಫ್‌ಎಸ್‌ಟಿ ಎಫ್‌ಐಆರ್ ದಾಖಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...