ಮತದಾನದ ಧ್ಯೇಯವಾಕ್ಯ | ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’

Date:

Advertisements

ಪ್ರತಿವರ್ಷ ಜನವರಿ 25ರಂದು ‘ರಾಷ್ಟ್ರೀಯ ಮತದಾರರ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ (Nothing like voting, I vote for sure) ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ದಲ್ಲಿ ‘ರಾಷ್ಟ್ರೀಯ ಮತದಾರರ ದಿನಾಚರಣೆ-2024’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಗಮಿಸಿ ಚಾಲನೆ ನೀಡಿದರು.

14ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮವನ್ನು ಜನವರಿ 25ರಂದು ಆಚರಿಸಲಾಗುತ್ತಿದ್ದು, ಈ ಚುನಾವಣಾ ಸಂಬಂಧಿತ ನಾನಾ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅವರನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜತೆಗೆ, ಕನ್ನಡ ಅವತಣಿಕೆಯ ‘ನಾ ಭಾರತ’ ಹಾಡನ್ನು ಗುರುವಾರ ಅನಾವರಣಗೊಳಿಸಲಾಯಿತು.

Advertisements

ರಾಜ್ಯದ ನಾನಾ ಪ್ರಸಿದ್ಧ ಸ್ಥಳಗಳು ಹಾಗೂ ಪ್ರಸಿದ್ದ ವ್ಯಕ್ತಿಗಳನ್ನೊಳಗೊಂಡಂತೆ ಈ ಹಾಡನ್ನು ಚಿತ್ರೀಕರಣ ಮಾಡಿದ್ದು, ದೃಶ್ಯಾವಳಿಯು ಅತ್ಯದ್ಬುತವಾಗಿ ಮೂಡಿಬಂದಿದೆ. (ವೀಡಿಯೋ ಲಿಂಕ್: https://we.tl/t-avnrFlPsQ8)

ಮೊದಲನೆ ಬಾರಿ ಮತದಾರರಿಗೆ ಗುರುತಿನ ಚೀಟಿ ವಿತರಣೆ

ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ವಿಕಲ ಚೇತನರು, ತೃತೀಯ ಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಇದೇ ವೇಳೆ, ಬ್ಯಾಡ್ಜ್ ವಿತರಿಸಿ ಮತದಾನ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ವಿತರಣೆ

ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದಂತಹ ಅಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜನವರಿ 26 ರಿಂದ ಪೀಣ್ಯ – ನಾಗಸಂದ್ರ ನಡುವೆ ಮೂರು ದಿನ ಮೆಟ್ರೋ ರೈಲು ಸಂಚಾರ ಸ್ಥಗಿತ

ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾದ ಕುರುಮರಾವ್, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್ ವಸ್ತ್ರದ್ ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X