ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ನಮ್ಮ ಸಹಕಾರ ಇದೆ: ಡಿ ಕೆ ಶಿವಕುಮಾರ್

Date:

ವಿರೋಧ ಪಕ್ಷದ ಶಾಸಕರಾಗಲಿ, ಆಡಳಿತ ಪಕ್ಷದ ಶಾಸಕರಾಗಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರೆ ಸ್ಪಂದಿಸಲು‌ ಸರ್ಕಾರ ಸಿದ್ಧವಾಗಿದೆ‌ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು‌ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದರು.

ಅಧಿವೇಶನದಲ್ಲಿ‌ ಉತ್ತರ ಕರ್ನಾಟಕದ ಸಮಸ್ಯೆಗಳ‌ ಬಗ್ಗೆ‌ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಕಿತ್ತೂರು‌ ಕರ್ನಾಟಕ, ಹಳೇ ಮೈಸೂರು ಕರ್ನಾಟಕ ಸೇರಿದಂತೆ ನಮ್ಮದು ಸಮಗ್ರ ಕರ್ನಾಟಕ. ವಿಧಾನಸಭೆಯಲ್ಲಿ ಚರ್ಚೆ ನಡೆಸಲು ನಾವು ಸದಾ ಸಹಕಾರ ನೀಡುತ್ತೇವೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಳಗಾವಿ ಜಿಲ್ಲೆ‌‌ ವಿಭಜನೆಗೆ ಕೂಗು ಕೇಳಿ ಬರುತ್ತಿದ್ದು, ಇಂದು ಕರೆ ನೀಡಲಾಗಿರುವ ಬಂದ್ ಬಗ್ಗೆ ಕೇಳಿದಾಗ “ಸದನದಲ್ಲಿ ಈ ವಿಚಾರದ ಬಗ್ಗೆ ಪ್ರಸ್ತಾವನೆ ಬಂದಾಗ‌ ಖಂಡಿತ ಚಿಂತನೆ ಮಾಡುತ್ತೇವೆ” ಎಂದರು.

ಸಾವರ್ಕರ್ ಫೋಟೊ ತೆರವು ವಿಚಾರ

ಪ್ರಿಯಾಂಕ್ ಖರ್ಗೆ‌ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆ‌ಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಕೇಳಿದಾಗ “ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಇಂಡಿಯಾ’ ಒಕ್ಕೂಟ ತೊರೆಯಲು ನಿರಾಕರಿಸಿದ್ದಕ್ಕೆ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಜೈಲು’

'ಇಂಡಿಯಾ' ಮೈತ್ರಿಕೂಟವನ್ನು ತೊರೆಯಲು ನಿರಾಕರಿಸಿದ್ದಕ್ಕೆ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ, ಜೆಎಂಎಂ ನಾಯಕ...

ರಾಜಸ್ಥಾನ | ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದ ಪ್ರಧಾನಿ ನರೇಂದ್ರ ಮೋದಿ!

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂಬ ಸುದ್ದಿಗಳು ಬರುತ್ತಿರುವ ನಡುವೆಯೇ...

ದಾಂಡೇಲಿ | ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನರ‌ ಸಾವು

ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ...