ಇಸ್ರೇಲ್‌-ಇರಾನ್‌ ಸಂಘರ್ಷ: ಮಧ್ಯಪ್ರಾಚ್ಯದಲ್ಲಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ ಮಾಡುತ್ತೇವೆ: ಸಚಿವ ಕೃಷ್ಣಬೈರೇಗೌಡ

Date:

“ಇರಾನ್‌-ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಯ ಪ್ರಯತ್ನ ಮಾಡುತ್ತೇವೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

- Advertisement -

ಈ ಕುರಿತು ಸೋಮವಾರ ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು “ಮಧ್ಯಪ್ರಾಚ್ಯ ಏಷ್ಯಾದಲ್ಲಿ ಇರಾನ್‌-ಇಸ್ರೇಲ್‌ ಸಂಘರ್ಷ ನಡೆಯುತ್ತಿದ್ದು ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಸಕ್ಕೆಂದು ಹೋಗಿದ್ದ ಕರ್ನಾಟಕದವರು ದುಬೈ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಸ್ಪಂದನೆಗಾಗಿಯೇ ಶನಿವಾರ ರಾತ್ರಿಯೇ ಸಹಾಯವಾಣಿಯನ್ನು ನೀಡಿದ್ದೇವೆ. ಇಲ್ಲಿಯವರೆಗೆ 109 ಮಂದಿ ನಮಗೆ ಕರೆ ಮಾಡಿ ತಾವಿರುವ ಸ್ಥಳವನ್ನು ಹೇಳಿದ್ದಾರೆ. ಯಾರೂ ಗಾಬರಿಯಾಗುವುದು ಬೇಡ. ರಾಜ್ಯ ಸರ್ಕಾರ ನಿಮ್ಮ ಜೊತೆ ಇರುತ್ತದೆ” ಎಂದು ಭರವಸೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರʼದಿಂದ ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಿಸಿದ್ದೇವೆ. ಮಧ್ಯಪ್ರಾಚ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ತಲುಪುವ ಪ್ರಯತ್ನವನ್ನು ಮಾಡುತ್ತಿದ್ದೇವೆ” ಎಂದರು.

“ಇಡೀ ವಿಮಾನ ಸಂಚಾರ ನಿಂತಿರುವುದರಿಂದ, ಪ್ರಯಾಣಕ್ಕೆ ಯಾವ ಪರ್ಯಾಯ ಮಾರ್ಗಗಳಿಲ್ಲ. ವಿಮಾನ ಸಂಚಾರಕ್ಕೆ ಅವಕಾಶ ಸಿಕ್ಕ ಕೂಡಲೇ, ವಿಶೇಷ ವಿಮಾನದ ವ್ಯವಸ್ಥೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಹೇಳಿದೆ. ಕದನ ವಿರಾಮ ಘೋಷಿಸುವ ತನಕ ವಿಮಾನ ಪ್ರಯಾಣ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು.

ಬ್ರಿಟನ್, ಅಮೆರಿಕದ ದುಷ್ಟ ಸಂಚುಗಳಿಗಿಲ್ಲ ಕೊನೆ: ಇರಾನ್ ಇತಿಹಾಸದ ಬಹುಮುಖ್ಯ ಮಜಲುಗಳಿವು

“ಈಗಾಗಲೇ ವಿಮಾನ ನಿಲ್ದಾಣಕ್ಕೆ ಬಂದು ಸಿಲುಕಿಕೊಂಡವರು, ʼರಾಜ್ಯ ವಿಪತ್ತು ನಿರ್ವಹಣ ಕೇಂದ್ರʼದ ಸಹಾಯವಾಣಿ ಸಂಖ್ಯೆ 080-22340675 ಅಥವಾ 22253707 ಕರೆ ಮಾಡಬಹುದು. ಕರೆ ಮಾಡಿದವರ ಮಾಹಿತಿಯನ್ನು, ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯಕ್ಕೆ ಕೊಡುತ್ತೇವೆ. ಅವರು ಆ ದೇಶದ ಸ್ಥಳೀಯ ಸಚಿವಾಲಯವನ್ನು ತಲುಪಿ, ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡವರಿಗೆ ವೀಸಾ ವ್ಯವಸ್ಥೆ ಮಾಡಿ, ವಿಮಾನ ನಿಲ್ದಾಣದಿಂದ ಹೊರಗಡೆ ಬರಲು ಸಹಾಯ ಮಾಡುತ್ತಾರೆ” ಎಂದು ಮಾಹಿತಿ ನೀಡಿದರು.

“ವಿಮಾನ ನಿಲ್ದಾಣದಿಂದ ಹೊರಬಂದವರಿಗೆ ರಾಯಭಾರ ಕಚೇರಿ ಮೂಲಕ ಹೋಟೆಲ್ ವ್ಯವಸ್ಥೆ ಮಾಡಿ ಅದರ ಖರ್ಚು ವೆಚ್ಚವನ್ನು ಸರ್ಕಾರ ಭರಿಸುವ ಬಗ್ಗೆ ಯೋಚಿಸುತ್ತಿದೆ. ರಾಜ್ಯ ಸರ್ಕಾರ ಮಧ್ಯಪ್ರಾಚ್ಯದಲ್ಲಿ ಸಿಲುಕಿಕೊಂಡ ಕನ್ನಡಿಗರಿಗೆ ಎಲ್ಲಾ ಸಹಕಾರ ನೀಡಲು ಸಿದ್ದ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...