ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

Date:

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಳ್ಳುತ್ತಿರುವ ಹಿನ್ನೆಲೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಕೆಲವು ಕಡೆಗಳಲ್ಲಿ ಭಾರಿ ಮಳೆ ಮತ್ತು ಗಂಟೆಗೆ 40-50 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ಜಾರಿಯಲ್ಲಿದೆ. ಮಳೆಯೊಂದಿಗೆ ಗುಡುಗು-ಮಿಂಚು ಸಾಧ್ಯತೆ ಹೆಚ್ಚಿರುವುದರಿಂದ ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ರೈತರು ಬೆಳೆಗಳಿಗೆ ಹಾನಿಯಾಗದಂತೆ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. ನಗರಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮುಂದಿನ ಕೆಲವು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಮುನ್ಸೂಚನೆಯನ್ನು ನಿರಂತರವಾಗಿ ಪರಿಶೀಲಿಸುವಂತೆ ಸಲಹೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...