ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ಜೊತೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆ ಜೊತೆಗೆ 30-40 ಕಿ.ಮೀ. ವೇಗದ ಗಾಳಿ ಬೀಸಲಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರೀ ಮಳೆ ಜೊತೆಗೆ 40-50 ಕಿ.ಮೀ. ವೇಗದ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ, ಸಾಮಾನ್ಯ ಮಳೆ ಜೊತೆಗೆ 40-50 ಕಿ.ಮೀ. ವೇಗದ ಗಾಳಿ ಬೀಸಲಿದೆ.
ರಾಜ್ಯದ ಮಲೆನಾಡು ಮತ್ತು ದಕ್ಷಿನ ಒಳನಾಡಿನಲ್ಲೂ ಮಳೆಯ ಸೂಚನೆಯಿದ್ದು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ಜೊತೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಹಗುರದಿಂದ ಮಧ್ಯಮ ಮಳೆ ಜೊತೆಗೆ 40-50 ಕಿ.ಮೀ. ವೇಗದ ಗಾಳಿ ಬೀಸಲಿದೆ.





