ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬ್ಯಾನರ್‌ನಲ್ಲಿ ಹಿಂದೂ ಹುಲಿಗಳೆಂದು ಸ್ವಾಗತ

Date:

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗಳಾದ ಅಮಿತ್ ಬದ್ಧಿ ಮತ್ತು ಗಣೇಶ್‌ ಮಿಸ್ಕಿನ್‌ಗೆ ಬ್ಯಾನರ್ ಹಾಕಿ ಸ್ವಾಗತಿಸಿದ ಘಟನೆ ಹುಬ್ಬ‍ಳ್ಳಿಯಲ್ಲಿ ನಡೆದಿದೆ.

- Advertisement -

ಈ ಹಿನ್ನಲೆಯಲ್ಲಿ ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, 7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಆರೋಪಿಗಳ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

ಇದೇ ವೇಳೆ ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು, ಆದರೆ ಇದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತವನ್ನು ನೀಡಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸಪ್ಟೆಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...