ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ; ಡಿ.6ರ ಬಳಿಕ ಎಲ್ಲ ವಿಚಾರ ತಿಳಿಸುತ್ತೇನೆ: ವಿ ಸೋಮಣ್ಣ

Date:

Advertisements

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, ‘ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಡಿ.6ರವರೆಗೆ ಏನೂ ಮಾತನಾಡಬೇಡಿ ಎಂದು ನನಗೆ ವರಿಷ್ಠರು ತಿಳಿಸಿದ್ದಾರೆ. ಡಿಸೆಂಬರ್​ 6ರ ಬಳಿಕ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ. 45 ವರ್ಷದ ರಾಜಕೀಯ ಅನುಭವವನ್ನು ತಿಳಿಸುತ್ತೇನೆ. ನನ್ನ ಹೋರಾಟವನ್ನು ಸಾಮಾನ್ಯ ಕಾರ್ಯಕರ್ತರಿಗೂ ತಿಳಿಸಬೇಕಿದೆ. ಆ ಕಾಲ ಬರಲಿ ಅಂತ ಕಾಯುತ್ತಿದ್ದೇನೆ’ ಎಂದು ತಿಳಿಸಿದರು.

ಬಿ.ವೈ. ವಿಜಯೇಂದ್ರರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಅರವಿಂದ ಲಿಂಬಾವಳಿ ಅವರ ಹೇಳಿಕೆಯ ಬಗ್ಗೆ ಉತ್ತರಿಸಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’ ಎಂದು ಸೋಮಣ್ಣ ಹೇಳಿಕೆ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬಸವತತ್ವಗಳ ಪ್ರಚಾರಕ್ಕೆ ರೂಪುರೇಷೆ: ’ಅನುಭವ ಮಂಟಪ’ ಸಭೆಯಲ್ಲಿ ಸ್ವಾರಸ್ಯಕರ ಚರ್ಚೆ

ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ. ಪಕ್ಷದಲ್ಲಿ ಹೋರಾಟ ಅನ್ನುವುದಕ್ಕಿಂತ ಹೆಚ್ಚಾಗಿ ಕೆಲಸಗಾರ ಅಂದರೆ ಏನು? ಅದಕ್ಕೆ ಮಾನದಂಡ ಏನು? ಹೈಕಮಾಂಡ್‌ ಪಕ್ಷಕ್ಕಾಗಿ ದುಡಿದವರನ್ನು ತಿರುಗಿ ನೋಡಿಲ್ಲವಾದ್ದರಿಂದ ಯಾವ ರೀತಿ ಹೊಡೆತ ಆಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ರಾಜಕಾರಣ ಡೊಂಬರಾಟ ಅಲ್ಲ, ನಾಟಕದ ಕಂಪನಿಯೂ ಅಲ್ಲ, ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ, ಒಳಒಪ್ಪಂದಕ್ಕೂ ಸೀಮಿತ ಅಲ್ಲ ಎಂದು ಹೇಳುವ ಮೂಲಕ ಆರ್‌. ಅಶೋಕ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿರುವುದು ಮತ್ತು ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

‘ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’ ಎಂದು ಸೋಮಣ್ಣ ಮತ್ತೆ ಮತ್ತೆ ಹೇಳುವ ಮೂಲಕ ಪ್ರತಿಪಕ್ಷವಾದ ಬಿಜೆಪಿಯಲ್ಲಿ ಮತ್ತೆ ಎಲ್ಲವೂ ಸರಿ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X